ಬೆಳಗಾವಿಯಲ್ಲಿ ಜೀಪ್‌ ಖರೀದಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ: ಪತ್ನಿಗೆ ಸೀರೆ ಖರೀದಿಸಿ ಸುದ್ದಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗ ಆಟಿಕೆಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

ಯಾವುದೇ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮಕ್ಕೆ ತೆರಳಿದರೂ ಇಷ್ಟದ ವಸ್ತುಗಳನ್ನು ಖರೀದಿಸುವುದು ಎಂದರೆ ಸಿಎಂ ಬೊಮ್ಮಾಯಿ ಅವರಿಗೆ ಇನ್ನಿಲ್ಲದ ಆಸಕ್ತಿ. ಹೀಗಾಗಿ ಅವರು ವಸ್ತುಗಳನ್ನು ಖರೀದಿಸುವ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದನ್ನೂ ಓದಿ: ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬೆಳಗಾವಿಯಲ್ಲಿ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿತ್ತು. ಉದ್ಘಾಟನೆ ನಂತರ ಮೇಳದಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದ ವಸ್ತುಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರಾಟ ಮೇಳದಲ್ಲಿ ಚನ್ನಪಟ್ಟಣದ ಪ್ರಸಿದ್ಧ ಆಟಿಕೆ ವಸ್ತುಗಳು ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದವು. ಈ ವೇಳೆ ಎರಡು ಆಟಿಕೆ ಜೀಪ್‍ಗಳನ್ನು ಖರೀದಿಸಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವತ್ ನಾರಾಯಣ್ ಹಾಗೂ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: 7 ಎಕರೆ ಆಸ್ತಿಗಾಗಿ 98 ವರ್ಷದ ವೃದ್ಧೆಯನ್ನೇ ಕಿಡ್ನಾಪ್‍ಗೈದ್ರು

ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 15 ರಿಂದ 20 ರವರೆಗೆ ನಡೆಯಲಿದೆ.

Comments

Leave a Reply

Your email address will not be published. Required fields are marked *