ಬೆಳಗಾವಿ ಪ್ರಕರಣದಲ್ಲಿ MESನ ಪ್ರಮುಖರನ್ನು ಬಂಧಿಸಲಾಗಿದೆ: ಬೊಮ್ಮಾಯಿ

ಬೆಳಗಾವಿ: ಕರ್ನಾಟಕದಲ್ಲಿ ಪುಂಡಾಟಿಕೆ ನಡೆಸಿದ ಪ್ರಮುಖರನ್ನು ಬಂಧಿಸಲಾಗಿದ್ದು, ಬೆಳಗಾವಿ ಪ್ರಕರಣವನ್ನು ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶಶಿಕಲಾ ಜೊಲ್ಲೆಗೆ ಸೇರಿದ ಕಟ್ಟಡ ಕಾಮಗಾರಿ ಮೇಲೆ ಶಿವಸೇನೆ ಹಾಗೂ ಎಂಇಎಸ್ ದಾಳಿ ನಡೆಸಿದ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಯಾವುದೇ ರೀತಿಯ ಕೆಲಸವನ್ನು ಮಾಡುತ್ತಿರಲಿಲ್ಲ. ತಪ್ಪು ಮಾಡದವರನ್ನು ಬಂಧಿಸಿ ಸುಮ್ಮನಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಪ್ರಮುಖರನ್ನು ಬಂಧಿಸಿ ಪ್ರಕರಣವನ್ನು ನಿಯಂತ್ರಣ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್

ಈ ಬಗ್ಗೆ ಮಹಾರಾಷ್ಟçದ ಸರ್ಕಾರದ ಜೊತೆಗೂ ಮಾತನಾಡಲಾಗಿದೆ. ಕನ್ನಡದ ಆಸ್ತಿ ಪಾಸ್ತಿ, ಜನರ ರಕ್ಷಣೆಗೆ ಸೂಕ್ತ ಕ್ರಮಕೈಗೊಳ್ಳುವ ಜೊತೆಗೆ ಮಹಾನಗರವನ್ನು ರಕ್ಷಿಸುವ ಕುರಿತು ತಿಳಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಯಾರಾದರೂ ಕೈಗೆ ತೆಗೆದುಕೊಂಡರೆ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಬಾರಿ ಅಹಿತಕರ ಘಟನೆಯನ್ನು ಯಾವುದೇ ರೀತಿಯಲ್ಲಿ ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: EXCLUSIVE: ಶಶಿಕಲಾ ಜೊಲ್ಲೆಗೆ ಸೇರಿದ 50 ಕೋಟಿ ಮೌಲ್ಯದ ಕಟ್ಟಡದ ಮೇಲೆ ದಾಳಿ

Comments

Leave a Reply

Your email address will not be published. Required fields are marked *