ಮನೆಗಾಗಿ ಭಿಕ್ಷೆ ಬೇಡುತ್ತಿಲ್ಲ, ಇಂದು ಕೊನೆಯ ಪತ್ರ ಬರೆಯುವೆ- ಸರ್ಕಾರದ ವಿರುದ್ಧ ಹೊರಟ್ಟಿ ಬೇಸರ

ಹುಬ್ಬಳ್ಳಿ: ಮನೆ ಕೊಡುವಂತೆ ನಾನು ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ನಾನು ಇನ್ನು ಮುಂದೆ ಮನೆ ಕೇಳುವುದಿಲ್ಲ. ಇಂದು ಮತ್ತೆ ಸರ್ಕಾರಕ್ಕೆ ಪತ್ರ ಬರೆಯುವೆ. ಇದು ನನ್ನ ಕೊನೇಯ ಪತ್ರ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮನೆ ನೀಡುವ ವಿಚಾರವಾಗಿ ಸರ್ಕಾರ ವಿಳಂಬ ಮಾಡುತ್ತಿರುವುದರ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೆ.30ರವರೆಗೆ ಭಾರತದಲ್ಲಿರುವ ವಿದೇಶಿಗರ ವೀಸಾ ವಿಸ್ತರಣೆ

ಶಾಲೆಗಳ ಆರಂಭದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 1 ರಿಂದ 6 ನೇ ತರಗತಿಯ ಶಾಲೆಗಳನ್ನು ಆರಂಭ ಮಾಡಬೇಕು. ಶಾಲೆ ಆರಂಭ ಮಾಡುವ ಅವಶ್ಯಕತೆ ಇದೆ. ನಾನು ಈ ಹಿಂದೆಯೇ ಶಾಲೆ ಆರಂಭ ಮಾಡಬೇಕು ಎಂದು ಸಲಹೆ ನೀಡಿದ್ದೆ ಎಂದರು.

ಮೌಲ್ಯಧಾರಿತ ರಾಜಕಾರಣ ಕುಸಿಯುತ್ತಿದೆ. ಗೆದ್ದ ಅಭ್ಯರ್ಥಿಗಳು ಸ್ವಾರ್ಥ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಬೇಕು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲವೋ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

Comments

Leave a Reply

Your email address will not be published. Required fields are marked *