ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಸಿಎಂಗೆ ಪತ್ರ ಬರೆದ ಹೊರಟ್ಟಿ

ಬೆಂಗಳೂರು: ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

basavaraj bommai

ಪತ್ರದಲ್ಲಿ ಏನಿದೆ?

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಜನ ಸದಸ್ಯರುಗಳು 2022ರ ಜನವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸುವ ಕುರಿತು ಈಗಾಗಲೇ ತಮ್ಮೊಂದಿಗೆ ಚರ್ಚಿಸಲಾಗಿದ್ದು ನೀವು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದೀರಿ ಅಲ್ಲದೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವೆಂಬರ್ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ಬಸವರಾಜ ಹೊರಟ್ಟಿ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪುನೀತ್ ಅಂತಿಮ ದರ್ಶನ ವೇಳೆ ಗಾಯಗೊಂಡ ಕಾನ್ಸ್​ಟೇಬಲ್ ಆರೋಗ್ಯ ವಿಚಾರಿಸಿದ ಆರಗ ಜ್ಞಾನೇಂದ್ರ

ಜನವರಿ ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ಜನ ವಿಧಾನ ಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದ್ದು, ಇದರಿಂದ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕವನ್ನು ಮೊದಲೇ ಪ್ರಕಟಿಸುವಂತೆ ಹೊರಟ್ಟಿ, ಮುಖ್ಯಮಂತ್ರಿಗಳನ್ನು ಕೋರಿದ್ದಾರೆ. ಇದನ್ನೂ ಓದಿ: ಇಬ್ಬರ ಬಾಳಿಗೆ ಬೆಳಕಾದ ಅಪ್ಪು

Comments

Leave a Reply

Your email address will not be published. Required fields are marked *