ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

ಭೂಪಾಲ್: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಪುಷ್ಪಾ ಬಾಯಿ (45) ಮೃತಳು, ಈಕೆ ಪತಿ ರಾಜಕುಮಾರ್ ಬಹೆ (50) ಕೊಲೆ ಮಾಡಿದ್ದಾನೆ. ಈತ ಅರಣ್ಯ ಇಲಾಖೆಯ ದಿನಗೂಲಿ ನೌಕರನಾಗಿದ್ದನು. ಸ್ನಾನಕ್ಕೆ ಹೋದಾಗ ತನ್ನ ಹೆಂಡತಿಯನ್ನು ಕರೆದು ಟವೆಲ್ ಕೊಡಲು ಹೇಳಿದ್ದ. ಆದರೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಳು. ಆತನ ಸ್ನಾನ ಮುಗಿದರೂ ಆಕೆ ಟವೆಲ್ ಕೊಡದಿದ್ದರಿಂದ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಡೆದಿದ್ದೇನು?: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಕಿರ್ನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೀರಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ:  ಆರೋಗ್ಯಕರವಾದ ಸೌತೆಕಾಯಿ ತಂಬುಳಿ ಮಾಡುವ ವಿಧಾನ

ರಾಜಕುಮಾರ್ ಬಹೆ ಸ್ನಾನದ ನಂತರ ಟವೆಲ್ ನೀಡುವಂತೆ ಕೇಳಿದ್ದ. ಪುಷ್ಪ ಅಡುಗೆ ಮನೆಯಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದುದರಿಂದ ಸ್ವಲ್ಪ ಸಮಯ ಕಾಯುವಂತೆ ಹೇಳಿದ್ದಳು. ಇದರಿಂದ ಕೋಪಗೊಂಡ ವ್ಯಕ್ತಿ ಸ್ನಾನ ಮುಗಿಸಿ ಹೊರಗೆ ಬಂದ ನಂತರ ಕಬ್ಬಿಣದ ರಾಡಿನಿಂದ ಪತ್ನಿಯ ತಲೆಗೆ ಪದೇ ಪದೇ ಹೊಡೆದಿದ್ದಾನೆ. ಇದರಿಂದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಅಪ್ಪನನ್ನು 23 ವರ್ಷದ ಮಗಳನ್ನು ತಡೆಯಲು ಪ್ರಯತ್ನಿಸಿದಾಗ ಆಕೆಗೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಕೋವಿಡ್-19 ಲಸಿಕೆ ಪಡೆದು 7.4 ಕೋಟಿ ರೂ. ಗೆದ್ದ ಯುವತಿ

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಭಾನುವಾರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

Comments

Leave a Reply

Your email address will not be published. Required fields are marked *