ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡ್ತಾಳೆ?- ತಂದೆ ಬಾಲಕೃಷ್ಣ ನಾಯ್ಕ್

ನ್ನನ್ನು ಮನೆಯ ಜಗಲಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಬಿಗ್ ಬಾಸ್‌ಗೆ (Bigg Boss Kannada 11) ಹೋಗಿದ್ದಳು ಎಂದು ಚೈತ್ರಾ (Chaithra Kundapura) ಮತ್ತು ಪತ್ನಿಯ ವಿರುದ್ಧ ಬಾಲಕೃಷ್ಣ ನಾಯ್ಕ್ ಕಿಡಿಕಾರಿದ್ದಾರೆ. ತಂದೆಗೆ ಅನ್ನ ಹಾಕದವಳು ದೇಶ ಸೇವೆ ಏನು ಮಾಡುತ್ತಾಳೆ ಎಂದು ಚೈತ್ರಾ ತಂದೆ ತಿರುಗಿಬಿದ್ದಿದ್ದಾರೆ. ಇದನ್ನೂ ಓದಿ:ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

ಮಗಳು ಚೈತ್ರಾ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದರು. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ

ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ ಎಂದು ಪತ್ನಿ ವಿರುದ್ಧವು ಮಾತನಾಡಿದ್ದಾರೆ.