ವಿಂಡೀಸ್ ವಿರುದ್ಧದ ಟೂರ್ನಿಗೆ ಟೀಂ ಇಂಡಿಯಾ ಪಟ್ಟಿ ಪ್ರಕಟ – ಧೋನಿ ಜಾಗಕ್ಕೆ ರಿಷಬ್ ಪಂತ್

ಮುಂಬೈ: 2019ರ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ವೆಸ್ಟ್ ಇಂಡೀಸ್ ವಿರುದ್ಧದ ಟೂರ್ ಗೆ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ನಡೆಯಲಿರುವ ಟೆಸ್ಟ್, ಏಕದಿನ ಮತ್ತು ಟಿ-20 ಪಂದ್ಯಕ್ಕೆ ವಿರಾಟ್ ಕೊಹ್ಲಿ ಅವನ್ನೇ ನಾಯಕರಾನ್ನಾಗಿ ಆಯ್ಕೆ ಮಾಡಲಾಗಿದೆ. ಜೊತೆಗೆ ವಿಶ್ವಕಪ್ ಟೂರ್ನಿಯಲ್ಲಿ ಗಾಯಗೊಂಡು ಹೊರಗುಳಿದಿದ್ದ ಶಿಖರ್ ಧವನ್ ಈ ಬಾರಿ ವಿಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯವಾಗಿದ್ದಾರೆ.

ವಿಕೆಟ್ ಕೀಪರ್, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮನವಿಯಂತೆ, ಅವರನ್ನು ಎರಡು ತಿಂಗಳು ಪ್ಯಾರಾಚೂಟ್ ರೆಜಿಮೆಂಟ್ ಕರ್ತವ್ಯಕ್ಕೆ ಕಳುಹಿಸಲಾಗಿದೆ. ಹೀಗಾಗಿ ಮೂರು ಮಾದರಿಯ ಕ್ರಿಕೆಟಿಗೆ ಧೋನಿ ಸ್ಥಾನವನ್ನು ರಿಷಬ್ ಪಂತ್ ತುಂಬಲಿದ್ದಾರೆ. ಇತ್ತ ಮತ್ತೊರ್ವ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಏಕದಿನ ಮತ್ತು ಟಿ-20 ಪಂದ್ಯದಿಂದ ಕೈಬಿಡಲಾಗಿದೆ.

ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ ಹಾಗೂ ಉಮೇಶ್ ಯಾದವ್.

ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

ಟಿ-20 ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

Comments

Leave a Reply

Your email address will not be published. Required fields are marked *