ಚೆಲುವನಾರಾಯಣಸ್ವಾಮಿ ಜಾತ್ರೆ ವೇಳೆ ಹೆಜ್ಜೇನು ದಾಳಿ: ಹರಕೆ ಹೊತ್ತವರಿಗೆ ಬಿಟ್ಟು, ಉಳಿದವರಿಗೆ ಕಡಿದ ಜೇನುಹುಳಗಳು!

ಮಂಡ್ಯ: ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ‘ತೊಟ್ಟಿಲ ಮಡು’ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ರಕ್ಷಣೆಗಾಗಿ ಭಕ್ತರು ಕಾಡಿನಲ್ಲಿ ಚೆಲ್ಲಾಪಿಲ್ಲಿಯಾಗಿ ಓಡಿರುವ ಘಟನೆ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಮೇಲುಕೋಟೆಯಲ್ಲಿ ನಡೆದಿದೆ.

ತೊಟ್ಟಿಲ ಮಡು ಜಾತ್ರೆಯಲ್ಲಿ ಪಾಲ್ಗೊಂಡು ಹರಕೆ ಹೊತ್ತರೆ ಮಕ್ಕಳಿಲ್ಲದವರಿಗೆ ಚೆಲುವನಾರಾಯಣಸ್ವಾಮಿ ಅಂತಹ ಮುದ್ದಾದ ಮಗು ಜನಿಸುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಪ್ರತಿ ವರ್ಷ ಜಾತ್ರೆಯಲ್ಲಿ ಮಕ್ಕಳಿಲ್ಲದ ಸಾವಿರಾರು ದಂಪತಿ ಭಾಗವಹಿಸುತ್ತಾರೆ. ಈ ವೇಳೆ ಚೆಲುವನಾರಾಯಣಸ್ವಾಮಿಯ ಪಾದುಕೆಯನ್ನು ಕಾಡಿನಲ್ಲಿ ಸುಮಾರು ಐದು ಕಿಲೋಮೀಟರ್ ನಷ್ಟು ದೂರದವರೆಗೆ ಮೆರವಣಿಗೆ ಮಾಡಲಾಗುತ್ತದೆ.

ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೆ ಈ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಉತ್ಸವದ ವೇಳೆ ತೀರ್ಥಸ್ನಾನಕ್ಕಾಗಿ ಹೋಗುತ್ತಿರುವಾಗ ಕಾಡಿನ ದರ್ಭ ತೀರ್ಥದ ಬಳಿ ಭಕ್ತರು ಹಾಗೂ ದೇವಾಲಯದ ಸಿಬ್ಬಂದಿಯ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿವೆ. ಹೆಜ್ಜೇನುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಡಿನಲ್ಲಿ ಜನ ಚೆಲ್ಲಾಪಿಲ್ಲಾಯಾಗಿ ಓಡಿದ್ದಾರೆ. ಇದಾದ ಬಳಿಕ ಎರಡು ಗಂಟೆಗಳ ನಂತರ ಉತ್ಸವ ಪ್ರಾರಂಭವಾಗಿದೆ.

ಇದರಲ್ಲಿ ವಿಶೇಷವೆಂದರೆ ಹೆಜ್ಜೇನುಗಳು ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತು ಬಂದ ಯಾವುದೇ ದಂಪತಿಗೆ ಕಚ್ಚದೇ ಬೇರೆಯವರಿಗೆ ಮಾತ್ರ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಭರಾಟೆ ಶೂಟಿಂಗ್ ವೇಳೆ ಮೇಲುಕೋಟೆ ಕಲ್ಯಾಣಿ ಅಶುಚಿತ್ವ – ಶ್ರೀ ಮುರುಳಿ ಸ್ಪಷ್ಟನೆ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *