ಬಳ್ಳಾರಿ: ಕೂಡ್ಲಿಗಿ ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಆಕ್ರೋಶ ಹೊರಹಾಕಿದ ಬೆಂಬಲಿಗರು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿ ಹಾಕಿ ಮೆರವಣಿಗೆ ಮಾಡಿದರು. ಬಳಿಕ ರಾಯಲ್ ಸರ್ಕಲ್‍ನಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಾಯಕರ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮುಂದುವರಿಸಿದರು.

ಪ್ರತಿಭಟನೆಯಿಂದಾಗಿ ರಾಯಲ್ ಸರ್ಕಲ್‍ನಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿ ನೂರಾರು ವಾಹನಗಳು ರಸ್ತೆಯಲ್ಲಿ ಸಾಲಾಗಿ ನಿಂತಿದ್ದವು. ಇತ್ತ ಶಾಸಕ ಭೀಮಾನಾಯ್ಕ್ ಅವರಿಗೂ ಸಚಿವ ಸ್ಥಾನ ಕೈತಪ್ಪಿದಕ್ಕೆ ಅವರ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply