ಒಗ್ಗಟ್ಟು ಇಲ್ಲದೆ 3 ಪಾಲಿಕೆಯಲ್ಲಿ ಸೋಲು – ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‍ಗೆ ಡಿಕೆಶಿ ಚಾರ್ಜ್‍ಶೀಟ್

ಬೆಂಗಳೂರು: ಮೂರು ಪಾಲಿಕೆ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಮೂಲಕ ಲೋಕಲ್ ಫೈಟ್, ಹೊಣೆಗಾರಿಕೆ ರಾಜ್ಯ ಮಟ್ಟಕ್ಕೆ ಶಿಫ್ಟ್ ಆಯ್ತಾ ಅನ್ನೋ ಪ್ರಶ್ನೆ ಎದ್ದಿದೆ. ಜವಾಬ್ದಾರಿ ವಹಿಸಿಕೊಳ್ಳದೆ ತಪ್ಪಿಸಿಕೊಂಡ ನಾಯಕನ ವಿರುದ್ಧ ಹೈಕಮಾಂಡ್‍ಗೆ ದೂರು ಕೊಡಲು ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು. ಮಹಾನಗರ ಪಾಲಿಕೆ ಫಲಿತಾಂಶದ ಬೆನ್ನಲ್ಲೇ ಕೈ ಪಾಳಯದಲ್ಲಿ ಚಾರ್ಜ್ ಶೀಟ್ ಪಾಲಿಟಿಕ್ಸ್ ಶುರುವಾಗಿದೆ. ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಾರ್ಜ್‍ಶೀಟ್ ಸಿದ್ಧಪಡಿಸತೊಡಗಿದ್ದು ಹೈಕಮಾಂಡ್‍ಗೆ ಸಲ್ಲಿಸಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ.

ಚಾರ್ಜ್‍ಶೀಟ್ ನಲ್ಲೇನಿದೆ..?
ರಾಜ್ಯದ ಪ್ರಮುಖ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಚುನಾವಣೆ ಇರುವುದು ಗೊತ್ತಿದ್ದರೂ ಚಿಕಿತ್ಸೆ ಹೆಸರಲ್ಲಿ ಜಿಂದಾಲ್ ಗೆ ದಾಖಲಾಗಿದ್ದಾರೆ. ಸಿದ್ದರಾಮಯ್ಯರಂತ ಜವಾಬ್ದಾರಿಯುತ ನಾಯಕ ಉದ್ದೇಶ ಪೂರ್ವಕವಾಗಿ ಅಂತರ ಕಾಯ್ದುಕೊಂಡಿದ್ದಾರೆ. ಅವರನ್ನ ಬಿಟ್ಟು ಏಕಾಂಗಿಯಾಗಿ ನಾನು ಪ್ರಚಾರಕ್ಕೆ ಹೋಗಿದ್ದರೆ ತಪ್ಪು ಸಂದೇಶ ರವಾನೆ ಆಗುತ್ತಿತ್ತು. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತ್ತೆ ಬಿಜೆಪಿಗೆ – ಎಂಐಎಂನಿಂದಾಗಿ ಕಾಂಗ್ರೆಸ್ಸಿಗೆ ಹಿನ್ನಡೆ

ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಸಮಸ್ಯೆ ಬಗೆಹರಿಸಲು ಸಹಕರಿಸಲಿಲ್ಲ. ಟಿಕೆಟ್ ಹಂಚಿಕೆ ಗೊಂದಲ ಪರಿಹರಿಸಲು ಸ್ಥಳೀಯ ನಾಯಕರಿಗೆ ಬುದ್ಧಿ ಹೇಳಲು ಸಹಕರಿಸಲಿಲ್ಲ. ಯಾವುದೇ ರೀತಿಯ ಸಹಕಾರ ನೀಡದೆ ಚುನಾವವಣೆಯ ಹಿಂದಿನ ದಿನ ಕೇವಲ ಪ್ರೆಸ್ ಮೀಟ್ ನಡೆಸಿ ಕೈ ತೊಳೆದುಕೊಂಡರು. ಸರಿಯಾಗಿ ಪ್ರಯತ್ನ ಪಟ್ಟಿದ್ದರೆ ಎರಡು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಬಹುದಿತ್ತು. ಹೀಗೆ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಚಾರ್ಜ್ ಶೀಟ್ ಸಿದ್ಧವಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನಾಡದ್ರೋಹಿ ಎಂಇಎಸ್‍ಗೆ ಸೋಲು – ಬೆಳಗಾವಿಯಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?

ಒಟ್ಟಿನಲ್ಲಿ ಮಹಾನಗರ ಪಾಲಿಕೆ ಚುನಾವಣಾ ಸೋಲಿಗೆ ಸಿದ್ದರಾಮಯ್ಯ ಅಸಹಕಾರ ಕೂಡ ಕಾರಣವಾಗಿದೆ. ಅಧ್ಯಕ್ಷರ ಜವಾಬ್ದಾರಿ ಮಾತ್ರ ಅಲ್ಲ, ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅವರ ಜವಾಬ್ದಾರಿ ನಿರ್ವಹಿಸಬೇಕಿತ್ತು. ಆದರೆ ಸಹಕರಿಸದೆ ಸುಮ್ಮನಾದರು ಎಂಬುದು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಚಾರ್ಜ್ ಶೀಟ್ ಸಲ್ಲಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಆಂತರಿಕ ವಲಯ ಹೇಳುತ್ತಿದೆ.  ಇದನ್ನೂ ಓದಿ: ಅತಂತ್ರವಾದರೂ ಬಿಜೆಪಿಗೆ ಅಧಿಕಾರ – ಕಲಬುರಗಿಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು? 

Comments

Leave a Reply

Your email address will not be published. Required fields are marked *