ಪ್ಲಾಸ್ಟಿಕ್ ಬಳಸಿದ್ದಕ್ಕೆ 500 ರೂ. ದಂಡ ಕಟ್ಟಿದ ಮೇಯರ್ ಗಂಗಾಂಬಿಕೆ

ಬೆಂಗಳೂರು: ತನಗೆ ವಿಧಿಸಿಲಾಗಿದ್ದ 500 ರೂ. ದಂಡವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಗಂಗಾಂಬಿಕೆ ಅವರು ಕಟ್ಟಿದ್ದಾರೆ.

ಮೇಯರ್ ಅವರು ದಂಡ ಕಟ್ಟುವ ಮೂಲಕ ಪ್ರತಿಯೊಬ್ಬರೂ ಈ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧ ಮಾಡಲಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅಲ್ಲದೆ ಎಲ್ಲರೂ ಈ ನಿಯಮಕ್ಕೆ ಕೈ ಜೋಡಿಸುತ್ತಾರೆ ಎಂದು ನಂಬಿದ್ದಾರೆ.

ದಂಡ ವಿಧಿಸಿದ್ದು ಯಾಕೆ..?
ಜುಲೈ 19ರಂದು ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಮೇಯರ್, ಬಿಎಸ್‍ವೈ ಅವರನ್ನು ಭೇಟಿ ಮಾಡಿದ್ದರು. ಭೇಟಿಯ ವೇಳೆ ಪ್ಲಾಸ್ಟಿಕ್ ನಲ್ಲಿ ಸುತ್ತಿದ್ದ ಡ್ರೈ ಫ್ರೂಟ್ಸ್ ಪ್ಯಾಕನ್ನು ನೀಡಿದ್ದಾರೆ.

ಗಿಫ್ಟ್ ನೀಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗುತ್ತಿದ್ದಂತೆ ಜನ ಮೇಯರ್ ಅವರಿಗೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಎಂದು ಬಿಬಿಎಂಪಿ ಹೇಳುತ್ತಿದೆ. ಆದರೆ ನೀವೇ ಪ್ಲಾಸ್ಟಿಕ್ ಬಳಸಿದ ಗಿಫ್ಟ್ ನೀಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸತೊಡಗಿದರು.

ಈ ಹಿನ್ನೆಲೆಯಲ್ಲಿ ಶನಿವಾರ ಸಂಪಂಗಿರಮನಗರ್ ವಾರ್ಡ್ ನಂಬರ್ 110ರ ಆರೋಗ್ಯಾಧಿಕಾರಿಯವರನ್ನು ಕರೆಸಿಕೊಂಡ ಮೇಯರ್, ಅವರಿಗೆ ತನ್ನ ದಂಡದ ಮೊತ್ತವನ್ನು ನೀಡಿದ್ದಾರೆ. ಅಲ್ಲದೆ 2016ರಲ್ಲೇ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಆದರೆ ಇದು ಈವರೆಗೂ ಸರಿಯಾದ ರೀತಿಯಲ್ಲಿ ನಿಷೇಧವಾಗಿಲ್ಲ. ಹೀಗಾಗಿ ಈ ಬಾರಿ ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದ್ದು, ನಾನೂ ದಂಡ ಕಟ್ಟುವ ಮೂಲಕ ಎಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ ಎಂಬುದನ್ನು ತೋರಿಸಿದ್ದೇನೆ. ನಾನೂ ಕೂಡ ಪ್ಲಾಸ್ಟಿಕ್ ಬಳಕೆ ಮಾಡಿರುವುದರಿಂದ ದಂಡ ಕಟ್ಟುತ್ತಿದ್ದೇನೆ. ಈ ಮೂಲಕ ಪ್ಲಾಸ್ಟಿಕ್ ನಿಷೇಧಕ್ಕೆ ಕೈ ಜೋಡಿಸುತ್ತಾರೆ ಎಂಬುದನ್ನು ನಂಬಿದ್ದೇನೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *