ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಮೋದಿ ಸರ್ಕಾರ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ಗೆ (BMRCL) ನಿರ್ದೇಶನ ನೀಡಿದೆ.

 

ಕಳೆದ ಭಾನುವಾರ ಪಬ್ಲಿಕ್‌ ಟಿವಿ ಮೆಟ್ರೋ ದರ ಏರಿಕೆಯಾಗುವುದು ಅನುಮಾನ ಎಂದು ವರದಿ ಪ್ರಕಟಿಸಿತ್ತು. ಈಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪಿಸಿ ಮೋಹನ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ದರ ಏರಿಕೆಯನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘ದೋಸ್ತಾ ನೀ ಮಸ್ತಾ’: ಗೆಳೆಯನ ಗೆಲುವುವನ್ನು ಸಂಭ್ರಮಿಸಿದ ಧನರಾಜ್ ಆಚಾರ್

ಪೋಸ್ಟ್‌ನಲ್ಲಿ ಏನಿದೆ?
ಫೆಬ್ರವರಿ 1 ರಂದು ನಿಗದಿಯಾಗಿದ್ದ ಬಿಎಂಆರ್‌ಸಿಎಲ್‌ನ 45% ಮೆಟ್ರೋ ದರ ಹೆಚ್ಚಳದ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೋದಿ ಸರ್ಕಾರ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿದೆ. ಬೆಂಗಳೂರಿನ ಜನರಿಗೆ ಒಂದು ದೊಡ್ಡ ಗೆಲುವು – ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಯುತ ಮೆಟ್ರೋ ಬೆಲೆ ನಿಗದಿಯನ್ನು ಖಚಿತಪಡಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ – ಕಾರು, ಬೈಕ್‌ ಸೇರಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ