ಬೆಂಗಳೂರು: ಮೂವತ್ತುಮೂರು ವರ್ಷಗಳ ನಂತರ ಶಾಲೆಯ ವಾತಾವರಣಕ್ಕೆ ಆಗಮಿಸಿದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ನೋಡಿ ಭಾವುಕರಾಗಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರೈಲ್ವೆಗೊಲ್ಲಹಳ್ಳಿ ಬಳಿಯ ಶ್ರೀ ಬೈಲಾಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ಹಳೆಯ ಹಾಗೂ ಹೊಸ ವಿದ್ಯಾರ್ಥಿಗಳು ಒಂದಾಗಿದ್ದಾರೆ. 1986 ಮತ್ತು 87ನೇ ಸಾಲಿನಲ್ಲಿ ಎಸ್‍ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು, ಗುರುವಂದನಾ ಎಂಬ ವೇದಿಕೆಯಿಂದ ಹಳೆಯ ನೆನಪುಗಳನ್ನು ಮತ್ತೆ ಮೆಲುಕು ಹಾಕಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮಿಜೀಗಳು, ರಸ ಪ್ರಶ್ನೆ ಮಾಡುವ ಮೂಲಕ 33 ವರ್ಷದ ಹಳೆಯ ನೆನಪುಗಳನ್ನು ಮತ್ತೆ ಮರುಕಳಿಸುವಂತೆ ಮಾಡಿದರು. ಎಲ್ಲಾ ಹಳೆಯ ವಿದ್ಯಾರ್ಥಿಗಳು ತಮ್ಮ ಹಿಂದಿನ ಶಾಲೆಯನ್ನು ನೆನಪಿಸಿಕೊಳ್ಳುವಂತೆ, ವಿದ್ಯಾರ್ಥಿಗಳ ಜಾಗದಲ್ಲಿ ಕುಳಿತು ತಮ್ಮ ಹಳೆಯ ಶಿಕ್ಷಕರ ನೀತಿ ಮಾತುಗಳನ್ನು ಕೇಳಿದರು.
ತಮ್ಮ ಶಾಲೆಯನ್ನು ಮದುಮಗಳಂತೆ ತಳಿರು ತೋರಣಗಳಿಂದ ಹಳೆಯ ವಿದ್ಯಾರ್ಥಿಗಳು ಸಿಂಗರಿಸಿದರು. ಇನ್ನೂ ಹಳೆಯ 55 ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ತಮ್ಮ ನೆನಪನ್ನು ಹಂಚಿಕೊಂಡರು.

Leave a Reply