ಬೆಂಗ್ಳೂರಿನ ನಂದಿನಿ ಲೇಔಟ್‍ನಲ್ಲಿ ಡ್ರೋಣ್ ಮೂಲಕ ಔಷಧಿ ಸಿಂಪಡಣೆ

ಬೆಂಗಳೂರು: ಕೊರೊನಾ ವೈರಸ್‍ನಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ನಂದಿನಿ ಲೇಔಟ್‍ನಲ್ಲಿ ಡ್ರೋಣ್ ಮೂಲಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಬಿಬಿಎಂಪಿ ಕಾರ್ಪೋರೇಟರ್ ಕೆ.ವಿ.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಮಾರುತಿನಗರ, ರವಿ ಬಡವಾಣೆ, ಪರಿಮಳ ನಗರ ಸೇರಿದಂತೆ ಹಲವು ಬಡವಾಣೆಗಳಲ್ಲಿ ಔಷಧಿ ಸಿಂಪಡಣೆ ಆರಂಭವಾಗಿದೆ. ಈ ಹಿನ್ನೆಲೆ ಮನೆಯಿಂದ ಯಾರು ಹೊರ ಬರದಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೆ ವಿದೇಶದಿಂದ ವಾಪಸ್ ಆಗಿರುವ ಹಾಗೂ ಹೋಮ್ ಕ್ವಾರೆಂಟೈನ್‍ನಲ್ಲಿರುವ ಕೊರೊನಾ ಶಂಕಿತರು ಹೆಚ್ಚನ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಔಷಧಿ ಸಿಂಪಡಣೆ ಆರಂಭಿಸಿದೆ.

ದೇಶದಲ್ಲಿ ಶುಕ್ರವಾರ ಒಂದೇ ದಿನ ಅತಿ ಹೆಚ್ಚು 125 ಕೊರೊನಾ ಪಾಸಿಟಿವ್ ದಾಖಲಾಗಿದ್ದು, ಒಟ್ಟು ಪೀಡಿತರ ಸಂಖ್ಯೆ 834ಕ್ಕೆ ಏರಿಕೆಯಾಗಿದೆ. ಈವರೆಗೂ 19 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಮೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *