ಬೆಂಗಳೂರಿಗರೇ ಗಮನಿಸಿ, ಪೀಣ್ಯ ಫ್ಲೈಓವರ್ ಸಂಚಾರ ಬಂದ್ – ಬದಲಿ ಮಾರ್ಗ ಇಲ್ಲಿದೆ

ನೆಲಮಂಗಲ: ಬೆಂಗಳೂರು- ತುಮಕೂರು ರಸ್ತೆಯನ್ನು ಸಂಪರ್ಕಿಸುವ ನವಯುಗ ಮೇಲ್ಸೇತುವೆಯಲ್ಲಿ ಬಿರುಕು ಮೂಡಿದ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿದೆ.

ಟಿ.ದಾಸರಹಳ್ಳಿಯ ಬಳಿಯ ದೀಪಕ್ ಬಸ್ ನಿಲ್ದಾಣದ ಬಳಿ ಮೇಲ್ಸೇತುವೆ ಬಿರುಕು ಮೂಡಿದ ಪರಿಣಾಮ ಕಿಲೋಮಿಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣು ಆಗಿದ್ದಾರೆ.  ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಿದ್ದು, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. ಇದನ್ನೂ ಓದಿ:  ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಸಂಪೂರ್ಣ ಸಹಕಾರ ನೀಡುವೆ: ಸಿಎಂ

 

ಸರ್ವಿಸ್ ರಸ್ತೆಯಲ್ಲೂ ವಿಪರೀತ ಟ್ರಾಫಿಕ್‌ ಜಾಮ್‌ ಆದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ತುಮಕೂರು ಕಡೆಯಿಂದ ಬರುವವರು ಮಾದವಾರ ಬಳಿ ಬಲ ತಿರುವು ಪಡೆದು ನೈಸ್ ರಸ್ತೆ ಮೂಲಕ ನಗರ ಪ್ರವೇಶಕ್ಕೆ ಸೂಚನೆಯನ್ನು ನೀಡಲಾಗಿದೆ. ಬೆಂಗಳೂರಿನಿಂದ ತುಮಕೂರು ಕಡೆ ಹೋಗುವವರು, ಗೊರಗುಂಟೆಪಾಳ್ಯದ ಸಿಎಂಟಿಐ ಜಂಕ್ಷನ್ ಬಳಿ ಎಡ ತಿರುವು ಪಡೆದು ಸುಮನಹಳ್ಳಿ, ಮಾಗಡಿ ರಸ್ತೆ ಮೂಲಕ ನೈಸ್ ರಸ್ತೆಯಿಂದ ಹೊರ ಹೋಗಲು ಸೂಚಿಸಲಾಗಿದೆ.

 

ಈ ಮೇಲ್ಸೇತುವೆ ದೋಷದಿಂದ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ಸಿಲುಕಿ ಪರದಾಡಿದೆ. 7-8 ಕಿ.ಮೀವರೆಗೆ ಟ್ರಾಫಿಕ್ ಜಾಮ್ ಆಗಿದೆ. ದುರಸ್ತಿ ಕಾರ್ಯಕ್ಕೆ ಅಂದಾಜು 6 ದಿನ ಬೇಕಾಗಿರುವ ಕಾರಣ ಅಲ್ಲಿಯವರೆಗೂ ಫ್ಲೈಓವರ್‌ ಮೇಲಿನ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗುತ್ತದೆ ಎಂದು ಪೀಣ್ಯ ಸಂಚಾರ ಪೊಲೀಸರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *