ಇಬ್ಬರು ಅಲ್‌ ಖೈದಾ ಉಗ್ರರಿಗೆ 7 ವರ್ಷ ಜೈಲು ಶಿಕ್ಷೆ

court order law

ಬೆಂಗಳೂರು: ಇಬ್ಬರು ಅಲ್‌ ಖೈದಾ (Al-Qaeda) ಉಗ್ರರಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ (NIA Special Court) 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಖ್ತರ್ ಹುಸೇನ್ ಲಷ್ಕರ್ ಮತ್ತು ಅಬ್ದುಲ್ ಅಲೀಂ ಮೊಂಡಲ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 2022ರ ಆಗಸ್ಟ್ 30ರಂದು ಪ್ರಕರಣ ದಾಖಲಾಗಿತ್ತು.

ಇಬ್ಬರು ಉಗ್ರರು ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳಿಂದ ಆನ್‌ಲೈನ್ ಮೂಲಕ ಮನ ಪರಿವರ್ತನೆಗೊಂಡು ಅಲ್‌ ಖೈದಾಗೆ ಹೊಸ ಯುವಕರನ್ನು ಸೇರ್ಪಡೆಗೊಳಿಸುತ್ತಿದ್ದರು. ಬಳಿಕ ಟೆಲಿಗ್ರಾಂ ಗ್ರೂಪ್‌ಗಳಿಗೆ ಸೇರಿಸಿ ಅಫ್ಘಾನಿಸ್ತಾನಕ್ಕೆ ತೆರಳಲು ಪ್ಲಾನ್ ಮಾಡುತ್ತಿದ್ದರು. ಇದನ್ನೂ ಓದಿ: ಮಂತ್ರಾಲಯದಲ್ಲಿ 2.95 ಕೋಟಿ ರೂ. ಕಾಣಿಕೆ ಸಂಗ್ರಹ

 

ಅಸ್ಸಾಂ (Assam) ಮೂಲದ ಅಖ್ತರ್ ಹುಸೇನ್‍ನ್ನು ಸಿಸಿಬಿ ಪೊಲೀಸರು ಮೊದಲು ಬಂಧಿಸಿದ್ದರು. ಈತ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಕೆಲ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ.   ಇದನ್ನೂ ಓದಿ: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

10ನೇ ತರಗತಿ ಓದಿದ್ದ ಹುಸೇನ್ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನೆ ನೀಡುತ್ತಿದ್ದ. ಸೋಷಿಯಲ್ ಮೀಡಿಯಾ ಬಳಸಿಕೊಂಡು ಭಾರತದಲ್ಲಿ ಗಲಭೆ ಎಬ್ಬಿಸುವುದು, ಬೆಂಗಳೂರಿನಲ್ಲಿ ಶಾಂತಿ ಹದಗೆಡಿಸುವುದೇ ಇವನ ಕೆಲಸವಾಗಿತ್ತು. ಬೆಂಗಳೂರು ಮತ್ತು ಬೇರೆ ಬೇರೆ ಜಿಲ್ಲೆಯ ಮಾಹಿತಿಯನ್ನು ಬೇರೆ ಸಂಘಟನೆಯ ಜೊತೆ ಹಂಚಿಕೊಳ್ಳುತ್ತಿದ್ದ.

ಬೆಂಗಳೂರಿನ ಪ್ರಮುಖ ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಶಂಕಿತ ಸಂಚು ರೂಪಿಸುತ್ತಿದ್ದ. ವಿಧಾನಸೌಧದ ಬಳಿ ಇರುವ ಅತಿ ಹೆಚ್ಚು ವಿಐಪಿಗಳ ಬಂದು ಹೋಗುವ ಹೋಟೆಲ್ ಟಾರ್ಗೆಟ್ ಮಾಡಿದ್ದ ಈತ ಹಲವು ಬಾರಿ ಆ ಹೋಟೆಲ್ ಬಳಿ ಬಂದು ಹೋಗಿದ್ದ. ಶಂಕಿತ ಉಗ್ರನ ಚಲನವಲನದ ಬಗ್ಗೆ ಸಿಸಿಟಿವಿ ಹಾಗೂ ಟೆಕ್ನಿಕಲ್ ಸಾಕ್ಷ್ಯವನ್ನು ಪೊಲೀಸರು ಸಂಗ್ರಹಿಸಿದ್ದರು.

ಅಲ್ ಖೈದಾ ಸಂಘಟನೆ ಜೊತೆ ನಿಕಟ ಸಂಪರ್ಕ ಹೊಂದಿದ್ದ ಈತ ದೊಡ್ಡ ಪ್ಲ್ಯಾನ್ ಮಾಡಿದ್ದ. ಈ ಬಗ್ಗೆ ತೆಲಂಗಾಣ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಐಬಿ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣ ಎನ್‌ಐಎ ಹಸ್ತಾಂತರವಾಗಿತ್ತು.