ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪ್ರಕರಣ ಸಂಬಂಧ ಕೆಎಸ್‌ಸಿಎ, ಸಮಾರಂಭ ಆಯೋಜಿಸಿದ್ದ ಆರ್‌ಸಿಬಿ ಫ್ರಾಂಚೈಸಿ, ವಿಜಯೋತ್ಸವದ ವೇಳೆ ಭದ್ರತೆ ಹೊಣೆ ಹೊತ್ತಿದ್ದ ಡಿಎನ್‌ಎ ಈವೆಂಟ್‌ ಮ್ಯಾನೇಜ್‌ಮೆಂಟ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.