ಸಿದ್ಧವಾಗಿದೆ ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ರಿಪೋರ್ಟ್ – ನಾಳೆ ಕೇಂದ್ರಕ್ಕೆ ಸಲ್ಲಿಕೆ?

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ (Chinnaswamy Stadium Stampede) ಕೇಸ್‌ಗೆ ಸಂಬಂಧಿಸಿದ ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ರಿಪೋರ್ಟ್ ಸಿದ್ಧವಾಗಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಾಳೆಯೊಳಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಯುಪಿಎಸ್‌ಸಿ ನಿಯಾಮವಳಿಗಳ ಪ್ರಕಾರ 15 ದಿನದೊಳಗಾಗಿ ವರದಿ ಸಲ್ಲಿಸಬೇಕು. ಐಪಿಎಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ರೆ ವರದಿ ಸಲ್ಲಿಸಬೇಕು. ಆದರೆ, ಅಮಾನತು ಬಗ್ಗೆ ಕೇಂದ್ರಕ್ಕೆ ಮಾಹಿತಿಯನ್ನಷ್ಟೇ ನೀಡಿರುವ ರಾಜ್ಯ ಸರ್ಕಾರ ಲಿಖಿತ ವರದಿ ನೀಡಬೇಕಿದೆ. ಡಿಪಿಎಆರ್‌ನಿಂದಲೇ ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ವರದಿ ತಯಾರಾಗಿದೆ. ಇದನ್ನೂ ಓದಿ: ಕಾಲ್ತುಳಿತ ತಡೆಗೆ ಹೊಸ ಕಾನೂನು – 3 ವರ್ಷ ಜೈಲು, 5 ಲಕ್ಷ ದಂಡ

ಐಪಿಎಸ್ ಅಧಿಕಾರಿಗಳಾದ ದಯಾನಂದ್, ಶೇಖರ್, ವಿಕಾಸ್ ಕುಮಾರ್ ಅವರನ್ನು ಚಿನ್ನಸ್ವಾಮಿ ಕಾಲ್ತುಳಿತದ ಕರ್ತವ್ಯಲೋಪದಡಿಯಲ್ಲಿ ಅಮಾನತು ಮಾಡಲಾಗಿತ್ತು. ಇದೀಗ ವರದಿಯಲ್ಲೂ ಪೊಲೀಸರ ಲೋಪ ಎತ್ತಿ ಹಿಡಿದಿದ್ಯಾ ರಾಜ್ಯ ಸರ್ಕಾರ ಎಂಬ ಪ್ರಶ್ನೆ ಮೂಡಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಹೊಣೆ ಪೊಲೀಸರದ್ದಾಗಿದ್ದು, ಐಪಿಎಸ್ ಅಧಿಕಾರಿಗಳ ಮೇಲೆ ಕರ್ತವ್ಯಲೋಪದ ಚಾರ್ಜ್‌ಶೀಟ್ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ಸಸ್ಪೆಂಡ್ ರಿಪೋರ್ಟ್ ಏನಾಗುತ್ತೆ? ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಸಸ್ಪೆಂಡ್ ಕ್ರಮವನ್ನ ಎತ್ತಿ ಹಿಡಿಯುತ್ತಾ ಅಥವಾ ರಿಜೆಕ್ಟ್ ಮಾಡುತ್ತಾ ಎಂಬುದು ಸದ್ಯದ ಕುತೂಹಲವಾಗಿದೆ. ಇದನ್ನೂ ಓದಿ: ಕಾಲ್ತುಳಿತ ತನಿಖೆಗೆ ಇನ್ನೊಂದು ವಾರ ಗಡುವು ಕೇಳಲು ಚಿಂತನೆ – ಸಿಸಿಟಿವಿ ಫೂಟೇಜ್ ನೀಡುವಂತೆ ಡಿಸಿ ಪತ್ರ