ಪತಿಯಿಂದ ವೈದ್ಯೆ ಹತ್ಯೆ; ಮಗಳಿಗಾಗಿ ಕಟ್ಟಿಸಿದ್ದ 4 ಕೋಟಿ ರೂ. ಮನೆ ಇಸ್ಕಾನ್‌ಗೆ ದಾನ ಮಾಡಿದ ತಂದೆ

ಬೆಂಗಳೂರು: ನಗರದಲ್ಲಿ ವೈದ್ಯೆಯೊಬ್ಬರು ಪತಿಯಿಂದಲೇ ಹತ್ಯೆಗೀಡಾಗಿದ್ದಾರೆ. ಮಗಳಿಗಾಗಿ ಕಟ್ಟಿಸಿದ್ದ 4 ಕೋಟಿ ಮೌಲ್ಯದ ಮನೆಯನ್ನು ತಂದೆ ಇಸ್ಕಾನ್‌ಗೆ (Iskcon) ದಾನ ಮಾಡಿದ್ದಾರೆ.

ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌

ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಮಹೇಂದ್ರ ರೆಡ್ಡಿ ಸಹ ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ.

ಮಗಳ ಸಾವಿನ ನೋವಿನಲ್ಲಿ ತಂದೆ ಮುನಿರೆಡ್ಡಿ ಇದ್ದಾರೆ. ಮಗಳು ವಾಸವಿದ್ದ ಮನೆಯನ್ನು ಇಸ್ಕಾನ್‌ಗೆ ದಾನ ಮಾಡಿದ್ದಾರೆ. ಮಗಳಿಗಾಗಿ ನಾಲ್ಕು ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ದರು. ಮಗಳ ನೆನಪು ಕಾಡುತ್ತೆ ಎಂದು ಇಸ್ಕಾನ್ ದೇವಸ್ಥಾನಕ್ಕೆ ಮನೆ ದಾನ ಮಾಡಿದ್ದಾರೆ. ಇದನ್ನೂ ಓದಿ: ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

2024ರ ಮೇ 26ರಂದು ಮಹೇಂದ್ರ ಮತ್ತು ಕೃತಿಕಾ ರೆಡ್ಡಿಗೆ ಮದುವೆಯಾಗಿತ್ತು. ವೈದ್ಯೆಗೆ ಅಜೀರ್ಣ, ಗ್ಯಾಸ್ಟ್ರಿಕ್ ಮತ್ತು ಲೋ ಶುಗರ್ ಸಮಸ್ಯೆ ಇತ್ತು. ಈ ವಿಚಾರ ಮಹೇಂದ್ರನಿಗೆ ತಿಳಿಸದೆ ಮದುವೆ ಮಾಡಿದ್ದರು. ಮದುವೆಯಾದ ಬಳಿಕ ಈ ವಿಚಾರ ಮಹೇಂದ್ರನಿಗೆ ಗೊತ್ತಾಗಿತ್ತು. ನಿತ್ಯ ವಾಂತಿ ಹಾಗೂ ಇತರ ಸಮಸ್ಯೆಯಿಂದ ಕೃತಿಕಾ ಬಳಲ್ತಿದ್ದರು. ಇದೇ ಕಾರಣಕ್ಕೆ ಆರೋಪಿ ಕೊಲೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.