ಬೆಂಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ ಪಿ ನಗರದ ಶಾಕಾಂಬರಿನಗರದಲ್ಲಿ ನಡೆದಿದೆ.
ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ದೇವಿಕಾ(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಬನಶಂಕರಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ಸುನೀಲ್ ಕುಮಾರ್ (38)ಕೂಡ ಅದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಈ ವೇಳೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಈ ನಡುವೆ ಗಂಡ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದನು. ಈ ಬಗ್ಗೆ ದೇವಿಕಾ ಪ್ರಶ್ನಿಸಿ ಜಗಳ ಮಾಡಿದ್ದರು. ಆದರೆ ಕಳೆದ ರಾತ್ರಿ 12 ಗಂಟೆ ಸುಮಾರಿಗೆ ತನ್ನ ಸಾವಿಗೆ ಗಂಡನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ದೇವಿಕಾ ಮೃತದೇಹ ರವಾನೆ ಮಾಡಲಾಗಿದ್ದು, ಘಟನೆಗೆ ಸಂಬಂಧಪಟ್ಟಂತೆ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply