ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ – ಗುಡುಗಿದ ಸುಧಾಕರ್

ಬೆಂಗಳೂರು: ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಎಂದು ಅನರ್ಹ ಶಾಸಕ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಿಡಿಕಾರಿದ್ದಾರೆ.

ಅನರ್ಹ ಶಾಸಕರು ಕಾಂಗ್ರೆಸ್‍ನಲ್ಲಿ ಇದ್ದಾಗ ರಾಜರಂತೆ ಇದ್ದರು. ಈಗ ಬಿಕ್ಷೆ ಬೇಡುತ್ತಿದ್ದಾರೆ ಎಂದು ಹೇಳಿದ್ದ ದಿನೇಶ್ ಗುಂಡೂರಾವ್ ಅವರ ವಿರುದ್ಧ ಗುಡುಗಿರುವ ಸುಧಾಕರ್, ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದು ಟ್ವೀಟ್ ಮಾಡಿದ್ದಾರೆ.

ಇಂದು ದಿನೇಶ್ ಗುಂಡೂರಾವ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಸುಧಾಕರ್ ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು. ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನಗಳನ್ನು ಗೆದ್ದಿದ್ದೆವು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು. ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. ‘ಮೂರು’ ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಗುಂಡೂರಾವ್ ಹೇಳಿದ್ದೇನು?
ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿದ್ದಾಗ ಅವರ ಬೇಡಿಕೆಗಳನ್ನು ಈಡೇರಿಸುತ್ತಿದ್ದೆವು. ಎಲ್ಲ ಸಮಸ್ಯೆಗಳನ್ನು ಆಲಿಸುತ್ತಿದ್ದೆವು. ಇಲ್ಲಿ ಅವರಿಗೆ ಮುಕ್ತ ಅವಕಾಶವಿತ್ತು. ಇಷ್ಟಾದರೂ ಪಕ್ಷ ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್ ಏನು ಮಾಡಿತ್ತು ಅವರಿಗೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದರು.

Comments

Leave a Reply

Your email address will not be published. Required fields are marked *