‘ಭೈರತಿ ರಣಗಲ್’ ಚಿತ್ರತಂಡ ಕಡೆಯಿಂದ ಶಿವಣ್ಣ ಫ್ಯಾನ್ಸ್‌ಗೆ ಸರ್ಪ್ರೈಸ್

ರ್ತನ್ ನಿರ್ದೇಶನದ ‘ಭೈರತಿ ರಣಗಲ್’ (Bhairathi Rangal) ಸಿನಿಮಾದ ಬಗ್ಗೆ ಇದೀಗ ಬಿಗ್‌ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಶಿವಣ್ಣ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಜು.12ರಂದು ಶಿವರಾಜ್‌ಕುಮಾರ್‌ ಅವರ (Shivarajkumar) ಹುಟ್ಟುಹಬ್ಬವಾಗಿದ್ದು, ಅಂದೇ ‘ಭೈರತಿ ರಣಗಲ್’ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ.

ಗೀತಾ ಪಿಕ್ಚರ್ಸ್ ಅಡಿಯಲ್ಲಿ ‘ಭೈರತಿ ರಣಗಲ್’ ಸಿನಿಮಾವನ್ನು ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.’ವೇದ’ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದಾಗಿದೆ.

ಅಂದಹಾಗೆ, ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ. ಕಥೆ ಮತ್ತು ಪಾತ್ರ ಎರಡು ವಿಭಿನ್ನವಾಗಿದ್ದು, ಸಿನಿಮಾಗಾಗಿ ಫ್ಯಾನ್ಸ್‌ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ ನನ್ನ ಕೆರಿಯರ್‌ನ ಬಿಗ್ ಬಜೆಟ್ ಚಿತ್ರ: ನಟ ಗಣೇಶ್

ಆನಂದ್ ಆಡಿಯೋ ಸಂಸ್ಥೆ ‘ಭೈರತಿ ರಣಗಲ್’ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.

ಕೆಲ ಮೂಲಗಳ ಪ್ರಕಾರ, ‘ಭೈರತಿ ರಣಗಲ್’ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.