ಬಿಎಸ್‍ಪಿಯನ್ನು ಮಾಯಾವತಿ ಬಿಜೆಪಿಗೆ ಮಾರಾಟ ಮಾಡಿದ್ದಾರೆ: ಭೀಮ್ ಆರ್ಮಿ ಮುಖ್ಯಸ್ಥ

ರಾಚಿ: ಬಹುಜನ ಸಮಾಜ ಪಕ್ಷದ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷವನ್ನು ಬಿಜೆಪಿಗೆ ಮಾರಾಟ ಮಾಡಿದ್ದಾರೆ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಆರೋಪಿಸಿದರು.

ಜಾರ್ಖಂಡ್‍ನ ಗರ್ವಾ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರ ಕ್ರಮಗಳು ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಆದರ್ಶಗಳಿಗೆ ತೀವ್ರ ಹಾನಿಯುಂಟು ಮಾಡಿದೆ ಎಂದು ಕಿಡಿಕಾರಿದರು.

ತನ್ನನ್ನು, ತನ್ನ ಸಹೋದರ ಹಾಗೂ ಇತರ ಸಂಬಂಧಿಕರನ್ನು ರಕ್ಷಿಸಿಕೊಳ್ಳಲು ಮಾಯವತಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಮುಂದೆ ಶರಣಾಗಿದ್ದಾರೆ. ಇದರಿಂದ ದಲಿತರಿಗೆ ದ್ರೋಹ ಬಗೆದಿದ್ದಾರೆ. ಇದನ್ನು ನಮ್ಮ ಸಂಘಟನೆ ಸಹಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೊಡಗಿನ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಯಾವಾಗಲೂ ದಲಿತ ಸಮುದಾಯವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: 10 ದಿನಗಳ ಬಂಧನದ ಬಳಿಕ ರಾಣಾ ದಂಪತಿಗೆ ಜಾಮೀನು

Comments

Leave a Reply

Your email address will not be published. Required fields are marked *