ವ್ಯಕ್ತಿಯ ಮೇಲೆ ಹಲ್ಲೆ ನಡೆಯುತ್ತಿದ್ದಾಗಲೇ ಎಂಟ್ರಿ ಕೊಟ್ಟ ಎಸ್ಪಿ- ಭಾರೀ ಮೆಚ್ಚುಗೆ

ಬೀದರ್: ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಯುತ್ತಿದ್ದ ವೇಳೆಯೇ ಎಸ್ಪಿ ಎಂಟ್ರಿ ಕೊಟ್ಟು ಆರೋಪಿಗಳನ್ನು ಅರೆಸ್ಟ್ ಮಾಡಿದ ಘಟನೆ ಬೀದರ್‌ನ ಕೌಠಾ ಗ್ರಾಮದ ಬಳಿ ನಡೆದಿದೆ.

ವೈಯಕ್ತಿಕ ವಿಚಾರಕ್ಕೆ ಮಲ್ಲಿಕಾರ್ಜುನ ಹಾಗೂ ಮತ್ತೋರ್ವ ಆರೋಪಿ ಸೇರಿಕೊಂಡು ಸೂರ್ಯಕಾಂತ್ ಎಂಬವನ ಮೇಲೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡುತ್ತಿದ್ದರು. ಇದೇ ವೇಳೆ ಬೀದರ್‌ನಿಂದ (Bidar) ಔರಾದ್‍ಗೆ ತೆರಳುತ್ತಿದ್ದ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಇದನ್ನು ಗಮನಿಸಿದ್ದಾರೆ. ಕೂಡಲೇ ಕಾರಿನಿಂದ ಇಳಿದು ಗಲಾಟೆ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

ಹೊಡೆದಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕ ವೀಡಿಯೋ `ಪಬ್ಲಿಕ್ ಟಿವಿ’ಗೆ ದೊರೆತಿದೆ. ಎಸ್ಪಿ ಸಮಯ ಪ್ರಜ್ಞೆಯಿಂದ ಒಂದು ಜೀವ ಉಳಿದಿದೆ ಎಂದು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]