Breaking- ‘ಕಬ್ಜ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಬಿಗ್ ಬಿ ಅಮಿತಾಬ್ ಬಚ್ಚನ್

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ (Amitabh Bachchan) ಇಂದು ಸಂಜೆ 5 ಗಂಟೆ 2 ನಿಮಿಷಕ್ಕೆ ಮುಂಬೈನಲ್ಲಿ ಕಬ್ಜ (Kabzaa) ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಮಾಡಲಿದ್ದಾರೆ. ಪ್ರಪಂಚದಾದ್ಯಂತ ಬಿಡುಗಡೆಗೂ ಮುಂಚೆಯೇ ಗಮನ ಸೆಳೆದಿರುವ ಈ ಸಿನಿಮಾ ಟ್ರೈಲರ್ ನೋಡಿ ಖುಷಿ ಪಟ್ಟಿರುವ ಅಮಿತಾಬ್, ನಿರ್ದೇಶಕರ ಆರ್.ಚಂದ್ರು ಅವರನ್ನು ಮುಂಬೈಗೆ ಕರೆಸಿಕೊಂಡು ಎಲ್ಲಾ ಭಾಷೆಗಳ ಟ್ರೈಲರ್ ಅನ್ನು ಬಿಡುಗಡೆ ಮಾಡುತ್ತಿದ್ದಾರೆ.

ಮೊನ್ನೆಯಷ್ಟೇ ರಿಲೀಸ್ ಆಗಿರುವ ಹಾಡು ಈಗಾಗಲೇ ಕೋಟ್ಯಂತರ ಕೇಳುಗರನ್ನು ತಲುಪಿದೆ. ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು. ಇಂದು ಸಂಜೆ 5 ಗಂಟೆ 2 ನಿಮಿಷಕ್ಕೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಏಕಕಾಲಕ್ಕೆ ಎಲ್ಲ ಭಾಷೆಯ ಟ್ರೈಲರ್ ಗಳು ರಿಲೀಸ್ ಆಗಲಿವೆ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಆಜಾದ್ ಮದುವೆ ನಿಜಾನಾ? ರಾಕೇಶ್ ರೋಷನ್ ಸ್ಪಷ್ಟನೆ

ನಿರ್ದೇಶಕ ಆರ್.ಚಂದ್ರು, ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಶ್ರೀಯಾ ಶರಣ್ ನಾಯಕಿಯಾಗಿದ್ದಾರೆ. ಭಾರೀ ಬಜೆಟ್, ಅದ್ಧೂರಿ ತಾರಾಗಣ ಹೊಂದಿರುವ ಚಿತ್ರ ಇದಾಗಿದೆ. ಅಲ್ಲದೇ, ಅಚ್ಚರಿ ಮೂಡಿಸುವಂತ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರಂತೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಷಯವನ್ನು ಸದ್ಯಕ್ಕೆ ಹೇಳುವುದಿಲ್ಲ ಎನ್ನುತ್ತಾರೆ ಚಂದ್ರು.

ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ನಿರ್ದೇಶಕರದ್ದು. ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದಾರೆ. ದೊಡ್ಡಮಟ್ಟದಲ್ಲೇ ಸಿನಿಮಾ ರಿಲೀಸ್ ಆಗುತ್ತಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ ಹಲವು ದೇಶಗಳಲ್ಲೂ ಏಕಕಾಲಕ್ಕೆ ಕಬ್ಜ ಬಿಡುಗಡೆ ಆಗಲಿದೆ.

Comments

Leave a Reply

Your email address will not be published. Required fields are marked *