ಉಪ್ಪಿ ಫ್ಯಾನ್ಸ್‌ಗೆ ಸಿಹಿಸುದ್ದಿ- ಆ.16ರಂದು ಸಿಗಲಿದೆ ‌’ಯುಐ’ ಚಿತ್ರದ ಸರ್ಪ್ರೈಸ್

ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ (UI) ಸಿನಿಮಾಗಾಗಿ ಎದುರು ನೋಡುತ್ತಿರುವ ಫ್ಯಾನ್ಸ್‌ಗೆ ಇದೀಗ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಯುಐ ಸಿನಿಮಾದ ಗುಡ್‌ ನ್ಯೂಸ್‌ ಕೊಡಲು ಮುಹೂರ್ತ ಫಿಕ್ಸ್‌ ಆಗಿದೆ.

ಇದೇ ಆ.16ರಂದು ‘ಯುಐ’ ಸಿನಿಮಾ ಬಗ್ಗೆ ಅಭಿಮಾನಿಗಳು ಖುಷಿಪಡುವಂತಹ ಸುದ್ದಿ ಹೊರಬೀಳಲಿದೆ. ಚಿತ್ರದ ಬಗ್ಗೆ ಬಿಗ್‌ ಅನೌನ್ಸ್‌ಮೆಂಟ್‌ ಬಗ್ಗೆ ಎಂದು ಉಪೇಂದ್ರ ಸೋಷಿಯಲ್‌ ಮೀಡಿಯಾದಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ಸಿನಿಮಾ ರಿಲೀಸ್ ಕುರಿತು ಮತ್ತು ಚಿತ್ರದ ಟ್ರೈಲರ್‌ ಬಗ್ಗೆ ಅಪ್‌ಡೇಟ್ ಸಿಗಲಿದೆ ಎನ್ನಲಾಗಿದೆ. ಅಧಿಕೃತ ಮಾಹಿತಿಗಾಗಿ ಕಾದುನೋಡಬೇಕಿದೆ.

 

View this post on Instagram

 

A post shared by Upendra Kumar (@nimmaupendra)

ಟೈಟಲ್‌ನಲ್ಲೇ ವಿಭಿನ್ನತೆ ತೋರಿಸಿರುವ ನಟ ಉಪೇಂದ್ರ ಈ ಬಾರಿ ಕಲಿಯುಗದ ಕಥೆ ಹೇಳೋಕೆ ಹೊರಟಿದ್ದಾರೆ. ಉಪೇಂದ್ರಗೆ ಜೋಡಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ (Reeshma Nanaiah) ನಟಿಸಿದ್ದಾರೆ. ಇದನ್ನೂ ಓದಿ:ನಾಗಾರಾಧನೆ ವೇಳೆ ಭಾವೋದ್ವೇಗಕ್ಕೆ ಒಳಗಾದ ಹಿರಿಯ ನಟಿ ಜ್ಯೋತಿ

ಈ ಚಿತ್ರವನ್ನು ಲಹರಿ ಸಂಸ್ಥೆ ಮತ್ತು ಕೆ ಪಿ ಶ್ರೀಕಾಂತ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ‘ಕಾಂತಾರ’ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತವಿದೆ. ಅಂದಹಾಗೆ, ‘ಯುಐ’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.