ಕೋಲಾರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಗಂಭೀರವಾಗಿ ಗಾಯಗೊಂಡ ನಾಲ್ವರು ಯುವಕರು ಅರ್ಧ ಗಂಟೆಗೂ ಹೆಚ್ಚು ಕಾಲ ರಕ್ತದ ಮಡುವಿನಲ್ಲಿ ರಸ್ತೆಯಲ್ಲೆ ನರಳಾಡಿದ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಿಟ್ಟಗಾನಹಳ್ಳಿಯಲ್ಲಿ ನಡೆದಿದೆ.
ಮಿಟ್ಟಗಾನಹಳ್ಳಿ ಗ್ರಾಮದ ಬಳಿ ಸಂಜೆ 5 ಗಂಟೆ ಸುಮಾರಿಗೆ ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಮಾಲೂರು ತಾಲೂಕಿನ ಹುಣಸೆಕೋಟೆಯ ಗೋಪಿ ಮತ್ತು ಯಶವಂತ್ ಸ್ಥಿತಿ ಚಿಂತಾಜನಕವಾಗಿದೆ. ಮಿಟ್ಟಗಾನಹಳ್ಳಿಯ ಲಕ್ಷ್ಮಣ್ ಮತ್ತು ಮಂಜುನಾಥ್ ಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ರಸ್ತೆಯಲ್ಲಿ ರಕ್ತದ ಮಡುವಿನಲ್ಲೆ ನರಳಾಡುತ್ತಿದ್ದರು, ಸ್ಥಳೀಯರು ಸಹಾಯಕ್ಕೆ ಬಾರದೆ ಅಮಾನವೀಯತೆ ಮೆರೆದಿದ್ದಾರೆ.
ತಮ್ಮ ಮೊಬೈಲ್ ಗಳಲ್ಲಿ ಅಪಘಾತದ ದೃಶ್ಯಗಳನ್ನು ಸೆರೆ ಹಿಡಿಯುತ್ತಾ, ಅಮಾನವೀಯವಾಗಿ ವರ್ತಿಸಿದ್ದಾರೆ. ಸದ್ಯ ಗಾಯಗೊಂಡವರನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply