ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ

ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ (Bike) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಬೈಕ್‌ ಚಲಾಯಿಸುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಹಾಸನದ (Hassan) ಬಿ‌.ಎಂ ರಸ್ತೆಯಲ್ಲಿ ನಡೆದಿದೆ.‌

ಮೃತ ಯುವಕನನ್ನು ಶಶಾಂಕ್ (21) ಎಂದು ಗುರುತಿಸಲಾಗಿದೆ. ವೇಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬಿಎಂ ರಸ್ತೆಯಲ್ಲಿ ಪೊಲೀಸ್‌ ವಾಹನಕ್ಕೆ ಡಿಕ್ಕಿಯಾಗಿ ಆತ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಅವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.‌ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳಿಗೆ ಗುಂಡಿಕ್ಕಿ ಹತ್ಯೆಗೈದ ಪತಿ

ಮೃತ ಶಶಾಂಕ್ ಸರ್ಕಾರಿ‌ ಕಾಲೇಜಿನಲ್ಲಿ ಅಂತಿಮ ವರ್ಷದ Msc ಓದುತ್ತಿದ್ದ ಎಂದು ತಿಳಿದುಬಂದಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದುಡ್ಡಿಲ್ಲ ಎಂದಿದ್ದಕ್ಕೆ ಕೆನ್ನೆಗೆ ಬಾರಿಸಿದ್ದ ನೇಪಾಳಿ ಮಂಜ – ಇದೇ ಸಿಟ್ಟಿಗೆ ನಡೆದಿತ್ತು ಮರ್ಡರ್!