ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!

– ಕೇಸ್ ಮುಚ್ಚಿ ಹಾಕಲು ನಡೆಯುತ್ತಿದ್ಯಾ ಯತ್ನ..?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಹಗರಣ ಬಿರುಗಾಳಿ ಎದ್ದಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. 10 ಸಾವಿರ ಕೋಟಿ ರೂ. ಬಿಟ್ ಕಾಯಿನ್ ಹಗರಣದ ಆರೋಪ ಕೇಳಿಬಂದಿದ್ದು, ಸೂಕ್ತ ತನಿಖೆ ಆದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕ ಎದುರಾಗಲಿದೆ. ಕೆಲವು ಪ್ರಭಾವಿಗಳ ಕುರ್ಚಿಗೆ ಕುತ್ತು ಬರಬಹುದು.

ಹಗರಣದಲ್ಲಿ ಆಡಳಿತ ಪಕ್ಷದವರೇ ಇದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಾಂಬ್ ಸಿಡಿಸಿದೆ. 10 ಸಾವಿರ ಕೋಟಿ ರೂ. ಬಿಟ್‍ಕಾಯಿನ್ ಹಗರಣ ದೊಡ್ಡ ದೊಡ್ಡ ರಾಜಕಾರಣಿಗಳಿದ್ದಾರೆ. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಆದರೆ ಹಗರಣವನ್ನು ಮುಚ್ಚಿಹಾಕಲು ಯತ್ನ ನಡೆಯುತ್ತಿದೆ. ದಾಖಲೆಗಳನ್ನು ಕಲೆ ಹಾಕ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳಿದ್ದಾರೆ: ಸಿದ್ದರಾಮಯ್ಯ

ಇನ್ನು ಈ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಡ್ರಗ್ಸ್, ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳಿದ್ದಾರೆ. ಇದೇ ಕಾರಣಕ್ಕೆ ತನಿಖಾಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸ್ತಿದ್ದಾರೆ. ಕೇಸ್ ಮುಚ್ಚಿ ಹಾಕಲು ಯತ್ನಿಸ್ತಿರುವ ವರದಿ ಕಳವಳಕಾರಿ. ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಪ್ರಭಾವ ಬೀರಿ ತನಿಖೆಯ ಹಾದಿ ತಪ್ಪಿಸದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಎಂದು ಒತ್ತಾಯಿಸಿದ್ದಾರೆ.

Comments

Leave a Reply

Your email address will not be published. Required fields are marked *