ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಚ್1ಎನ್1 ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅಮಿತ್ ಶಾ, ನಾನು ಎಚ್1ಎನ್1 ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಅಶೀರ್ವಾದಿಂದ ಬಹುಬೇಗ ಗುಣಮುಖನಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.
मुझे स्वाइन फ्लू हुआ है, जिसका उपचार चल रहा है। ईश्वर की कृपा, आप सभी के प्रेम और शुभकामनाओं से शीघ्र ही स्वस्थ हो जाऊंगा।
— Amit Shah (@AmitShah) January 16, 2019
ಸದ್ಯ ಅಮಿತ್ ಶಾ ಉಸಿರಾಟ ತೊಂದರೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದು ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಇದನ್ನು ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?
ಇವರೆಗೂ ಜೈಪುರದಲ್ಲಿ 17 ಎಚ್1ಎನ್1 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಉಳಿದಂತೆ 13 ಜನರ ರಕ್ತದ ಮಾದರಿಗಳಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಅಲ್ಲದೇ ರಾಜ್ಯದಲ್ಲಿ 935 ಶಂಕಿತ ವ್ಯಕ್ತಿಗಳ ರಕ್ತ ಪರೀಕ್ಷೆ ಮಾಡಲಾಗಿದ್ದು, ಕಳೆದ 15 ದಿನಗಳಿಂದ ಎಚ್1ಎನ್1 ಸೋಂಕಿನಿಂದ 39 ಮಂದಿ ರಾಜಸ್ಥಾನದಲ್ಲಿ ಸಾವನ್ನಪ್ಪಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply