ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ – ಪಕ್ಷದಿಂದ ಬಿಜೆಪಿ ನಾಯಕನ ಉಚ್ಚಾಟನೆ

ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆದ 13 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉತ್ತರಾಖಂಡದ ಬಿಜೆಪಿ (BJP) ನಾಯಕ ಆದಿತ್ಯ ರಾಜ್ ಸೈನಿ (Aditya Raj Saini) ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೇ ಹಿಂದುಳಿದ ವರ್ಗಗಳ ಆಯೋಗದ ನಾಮನಿರ್ದೇಶಿತ ಸದಸ್ಯರಾಗಿರುವ ಸೈನಿಯವರನ್ನು ಆ ಹುದ್ದೆಯಿಂದಲೂ ತೆಗೆದುಹಾಕಲಾಗಿದೆ.

ಮೂರು ದಿನಗಳ ಹಿಂದೆ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯ ಶವ ಮಂಗಳವಾರ ಪತಂಜಲಿ ಸಂಶೋಧನಾ ಕೇಂದ್ರದ ಬಳಿಯ ಬಹದ್ರಾಬಾದ್ ಪ್ರದೇಶದ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

ಬಿಜೆಪಿ ನಾಯಕ ಮತ್ತು ಆತನ ಸಹಚರರಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಮೃತ ಬಾಲಕಿಯ ಕುಟುಂಬದವರು ಸೈನಿ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

ಬಾಲಕಿ ಜೂ.24 ರಂದು ಸಂಜೆ ಮನೆಗೆ ಬಾರದ ಹಿನ್ನೆಲೆ, ಆಕೆಯ ಫೋನ್‍ಗೆ ಕುಟುಂಬಸ್ಥರು ಕರೆ ಮಾಡಿದ್ದರು. ಬಿಜೆಪಿ ಮುಖಂಡರು ಕರೆ ಸ್ವೀಕರಿಸಿ, ಬಾಲಕಿ ತಮ್ಮೊಂದಿಗೆ ಇದ್ದಾರೆ ಎಂದು ಹೇಳಿದ್ದರು ಎಂದು ಬಾಲಕಿಯ ಕುಟುಂಬಸ್ಥರು ಹೇಳಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್