ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ

ಮಂಡ್ಯ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಗಣಿಸಬೇಕು ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಒಂದು, ಎರಡು ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳಲಾಗುವುದಿಲ್ಲ. ಆದರೆ ಮುಂದೆ ಇಂತಹ ಘಟನೆಯಗಳು ನಡೆಯದಂತೆ ಎಚ್ಚರವಹಿಸಬೇಕಿದೆ ಎಂದರು.

ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಂತಹ ಪ್ರಕರಣಗಳಿಂದ ಸಾಂಸ್ಕೃತಿಕ ನಗರಿಗೆ ಕಪ್ಪು ಚುಕ್ಕೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ತಾಯ್ನಾಡಿಗೆ ಕರೆತಂದ ಮೋದಿಗೆ ಹಾಡಿನ ಧನ್ಯವಾದ ತಿಳಿಸಿದ ಸಿಖ್ಖರು

ನಡೆದಿದ್ದು ಏನು..?
ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ಜೋಡಿಯೊಂದು ಕುಳಿತಿತ್ತು. ಈ ವೇ:ಎ ಅಲ್ಲಿಗೆ ಪಾನಮತ್ತ ಯುವಕರ ತಂಡವೊಂದು ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಜೋಡಿಯನ್ನು ನೋಡಿದ ಯುವಕರು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಸದ್ಯ ಯುವಕ ಹಾಗೂ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಯುವತಿ ಉತ್ತರ ಪ್ರದೇಶ ಮೂದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *