ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ

ಬೆಳಗಾವಿ: ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

ನಗರದಲ್ಲಿ ತಡರಾತ್ರಿ ಎಂಇಎಸ್ ಪುಂಡರು ಅಟ್ಟಹಾಸ ಮೆರೆದಿದ್ದು, ಜಿಲ್ಲೆಯಾದ್ಯಂತ ಹಿಂಸಾಚಾರ ಕೃತ್ಯ ಎಸಗಿದ್ದಾರೆ. ಸದ್ಯ ಕುಂದಾನಗರಿ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಸೃಷ್ಟಿಯಾಗಿದೆ.

ಇಂದು ಬೆಳ್ಳಗ್ಗೆ ಈ ಘಟನೆ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಮುಖ್ಯಮಂತ್ರಿ ಅವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಆದೇಶ ನೀಡಬೇಕು.

ಮುಖ್ಯಮಂತ್ರಿ ಅವರೇ,ಇದಕ್ಕೆಲ್ಲ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಇದೀಗ ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ. ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಇದನ್ನೂ ಓದಿ:  ರಾತ್ರಿ ಬಂದು ಮಸಿ ಹಚ್ಚೋ ಅಯೋಗ್ಯರಿಗೆ ಗೃಹ ಸಚಿವರು ಏನು ಮಾಡ್ಬೇಕು: ಯತ್ನಾಳ್

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವುದೇ ಸಿದ್ದರಾಮಯ್ಯ ಅವರ ಚಾಳಿ. ಎಲ್ಲದಕ್ಕೂ ಸಂದರ್ಭ, ಉಚಿತಾನುಚಿತ ಪ್ರಜ್ಞೆ ಎನ್ನುವುದಿರುತ್ತದೆ. ಬೆಳಗಾವಿಯಲ್ಲಿ ದುಷ್ಕರ್ಮಿಗಳು ನಡೆಸಿದ ಪುಂಡಾಟವನ್ನು ಕೋಮು ದ್ವೇಷಕ್ಕೆ ಪರಿವರ್ತಿಸುವ ಇರಾದೆ ಏಕೆ? ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ ಎಂದು ಟ್ವೀಟ್ ಮಾಡಿದೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

Comments

Leave a Reply

Your email address will not be published. Required fields are marked *