ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ: ಬಿಜೆಪಿ

ಬೆಂಗಳೂರು: ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್ ಪ್ರೈವೇಟ್ ಲಿಮಿಟೆಡ್ ಎಂಬಂತಾಗಿದೆ. ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ ಎಂದು ಜೆಡಿಎಸ್ ವಿರುದ್ಧ ಬಿಜೆಪಿ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದೆ.

HDK

ಟ್ವೀಟ್‍ನಲ್ಲಿ ಏನಿದೆ?
ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್ ಪ್ರೈವೇಟ್ ಲಿಮಿಟೆಡ್ ಎಂಬಂತಾಗಿದೆ. ಭಾರತದಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಕುಟುಂಬವಾದದ ಬಹುದೊಡ್ಡ ಫಲಾನುಭವಿ. ಜೆಡಿಎಸ್ ಪಕ್ಷ ಹೇಳಿಕೊಳ್ಳುತ್ತಿರುವ ಮಿಶನ್ 123 ವಾಸ್ತವದಲ್ಲಿ ಮಿಶನ್ 123 ಅಲ್ಲ, ಅದು ಮಿಶನ್ 1+2+3!. 1 – ದೇವೇಗೌಡ, 2 – ಕುಮಾರ ಸ್ವಾಮಿ, ರೇವಣ್ಣ, 3 – ಅನಿತಾ, ಪ್ರಜ್ವಲ್, ಸೂರಜ್. 1+2+3=6, ಅಂದರೆ ದೇವೇಗೌಡ ಕುಟುಂಬದ ಗೆಲುವೇ ಪಕ್ಷದ ಗೆಲುವೇ? ಇದು ಕುಟುಂಬವಾದ ಅಲ್ಲದೆ ಮತ್ತೇನು? ಮಾಜಿ ಸಿಎಂ ಎಚ್‍ಡಿಕೆ ಅವರೇ? ಇದನ್ನೂ ಓದಿ: ಬೆಂಗ್ಳೂರಿನ ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರ ಜಗಳ ಹಿಂದಿದೆ ಡೇಟಿಂಗ್ ರಹಸ್ಯ

https://twitter.com/BJP4Karnataka/status/1526798980621172736

ನಿಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಶುಭವಾಗಲಿ. ಆದರೆ ಜೆಡಿಎಸ್ ಪಕ್ಷದ ಪಂಚರತ್ನ ಎಂದರೆ ಜನ ಬೇರೆಯದೇ ಮಾತನಾಡುತ್ತಾರೆ. ದೇವೇಗೌಡ, ರೇವಣ್ಣ, ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಇವರೇ ಜೆಡಿಎಸ್ ಪಂಚರತ್ನಗಳು. ಐದು ಕ್ಷೇತ್ರದ ಗೆಲುವೇ ಪಂಚರತ್ನ ಯೋಜನೆಯೇ? 123 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ ಎಂದು ಬೀಗುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ, 123 ಕ್ಷೇತ್ರಗಳಿಗೆ ನಿಮ್ಮ ಪಕ್ಷದಿಂದ ಅಭ್ಯರ್ಥಿಗಳು ಸಿಗಬಹುದೇ? ನಿಮ್ಮ ವಂಶಾಡಳಿತದಿಂದ ಬೇಸತ್ತು ವಲಸೆ ಹೋಗುವವರ ಸಂಖ್ಯೆಯೇ ಇದರ ಕಾಲು ಭಾಗದಷ್ಟಿದೆ. ಹೀಗಿರುವಾಗ ಜೆಡಿಎಸ್ ನಾಮಾವಶೇಷವಾಗುವುದರಲ್ಲಿ ಸಂಶಯವಿದೆಯೇ? ಇದನ್ನೂ ಓದಿ: ಬಾಲಚಂದ್ರ ಜಾರಕಿಹೊಳಿ ಬದಲು ಆಪ್ತ ಕಾರ್ಯದರ್ಶಿಗಳಿಂದ ಕಾಮಗಾರಿ ಉದ್ಘಾಟನೆ : ಕಾಂಗ್ರೆಸ್

Comments

Leave a Reply

Your email address will not be published. Required fields are marked *