ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಾಯಕರೇ ಕೆಪಿಸಿಸಿ ಅಧ್ಯಕ್ಷರ ಡೀಲ್ ರಹಸ್ಯ ಬಯಲು ಮಾಡಿದ್ದು, ಇದೀಗ ಡಿಕೆಶಿಗೆ ಬಿಜೆಪಿ ತಿರುಗೇಟು ನೀಡಿದೆ.

ಈ ಸಂಬಂಧ ಭ್ರಷ್ಟಾಧ್ಯಕ್ಷ ಎಂದು ಹ್ಯಾಶ್ ಟ್ಯಾಗ್ ಹಾಕಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮಾನ್ಯ ಡಿಕೆಶಿ ಅವರೇ ಸೀಸರ್ ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ. ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಧಿಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇಬೇಕಲ್ಲವೇ?. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ಕಾಂಗ್ರೆಸ್ ನಾಯಕ ಉಗ್ರಪ್ಪ ಹಾಗೂ ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?. ಇದನ್ನೂ ಓದಿ: ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

ಮುಖ್ಯಮಂತ್ರಿಯಾಗುವ ಡಿ.ಕೆ ಶಿವಕುಮಾರ್ ಅವರ ಕನಸಿಗೆ ಕಾಂಗ್ರೆಸ್ ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಪಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ. ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ “ಡಿಕೆಶಿ ಪದಚ್ಯುತಿ” ಎಂಬ ಮಾಸ್ಟರ್ ಪ್ಲ್ಯಾನ್‍ನ ಭಾಗವೇ?.

https://twitter.com/BJP4Karnataka/status/1448171886152585219

ಡಿಕೆಶಿ ಅವರೇ, ನಿಮ್ಮ ಹುಡುಗರೇ 50 ರಿಂದ 100 ಕೋಟಿ ಇದೆಯಂತೆ, ಹಾಗಾದರೆ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಬಳಿ ಎಷ್ಟಿರಬಹುದು? ಇದು ಕೆಪಿಸಿಸಿ ಕಚೇರಿಯಿಂದಲೇ ಎದ್ದಿರುವ ಅಧಿಕೃತ ಅನುಮಾನ. ಈ ಪ್ರಶ್ನೆ ರಾಜ್ಯದ ಜನತೆಯನ್ನೂ ಕಾಡುತ್ತಿದೆ. ಇದಕ್ಕೆ ನೀವಲ್ಲದೆ ಇನ್ಯಾರು ಉತ್ತರಿಸುತ್ತಾರೆ ಎಂದು ಬರೆದುಕೊಂಡಿ ಡಿಕೆಶಿಗೆ ಟ್ಯಾಗ್ ಮಾಡಲಾಗಿದೆ. ಒಟ್ಟಿನಲ್ಲಿ ಸಲೀಂ ಹಾಗೂ ಉಗ್ರಪ್ಪ ನಡುವೆ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿರುವ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಉಂಟುಮಾಡಿದೆ.

ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಗುಸುಗುಸು ಮಾತಿಗೆ ನಿಮ್ಮ ಅಭಿಪ್ರಾಯಗಳೇನು..? 

Comments

Leave a Reply

Your email address will not be published. Required fields are marked *