ಆಪರೇಷನ್ ಕಮಲಕ್ಕೆ ಮತ್ತೆ ರೆಕ್ಕೆಪುಕ್ಕ – ಬಿಜೆಪಿಗೆ ಹಾರಲು ಸಿದ್ಧವಾಗಿರುವ ಶಾಸಕರು ಯಾರು?

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ರಾಜ್ಯ ಮೈತ್ರಿ ಕೂಟ ಕೊಚ್ಚಿ ಹೋಗುತ್ತಾ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಶುರುವಾಗಿದೆ.

ಬಿಜೆಪಿ ಕರೆದರೆ ನೋಡೋಣ ಎಂದು ಕಾಂಗ್ರೆಸ್‍ನ ಅತೃಪ್ತರು ಶಾಸಕರು ಹೇಳಿದ್ದಾರೆ. ಈ ದಿಢೀರ್ ಬೆಳವಣಿಗೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅವರು ಇಂದು ದೊಡ್ಡ ನಿರ್ಧಾರ ಕೈಗೊಳ್ಳುತ್ತಾರಾ ಅಥವಾ ಕೈ ಶಾಸಕರ ಅಸಮಾಧಾನ ಶಮನಕ್ಕೆ ಸಂಧಾನ ಸೂತ್ರ ಸಿದ್ಧ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಕೇಳಿ ಬರುತ್ತಿದೆ.

ಸಿಎಂ ರಾಜೀನಾಮೆ:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ವದಂತಿ ಸಹ ಕೇಳಿ ಬೆರುತ್ತಿದೆ. ಕಾಂಗ್ರೆಸ್ ಶಾಸಕರ ಬಂಡಾಯವೇ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಡುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆದಿದೆ ಎನ್ನುವ ಮಾತುಗಳು ಈಗ ಕೇಳಿ ಬಂದಿದೆ.

ಆಪರೇಷನ್ ಕಮಲ ತಪ್ಪಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುತ್ತಾರಾ? ಕಾಂಗ್ರೆಸ್ ಶಾಸಕರ ಅಸಮಾಧಾನ ಶಮನಕ್ಕೆ ಇಂತಹದ್ದೊಂದು ಕಠಿಣ ನಿರ್ಧಾರ ಕೈಗೊಳ್ಳುತ್ತಾರಾ? ತುರ್ತು ಸಂಪುಟ ಸಭೆಯಲ್ಲಿ ಸಿಎಂ ಕೈಗೊಳ್ಳುವ ನಿರ್ಧಾರವಾದರೂ ಏನು ಎಂಬ ಪ್ರಶ್ನೆಗಳು ಭಾರೀ ಚರ್ಚೆ ಕಾರಣವಾಗಿವೆ.

ಬಿಜೆಪಿ ಸೇರಬಹುದಾದ ಶಾಸಕರು ಯಾರು?:
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಬಳ್ಳಾರಿ ಶಾಸಕ ನಾಗೇಂದ್ರ ಮೊದಲ ಪಟ್ಟಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಉಳಿದಂತೆ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಕಾಗವಾಡ ಶಾಸಕ ಶ್ರೀಮಂತಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಕಂಪ್ಲಿ ಶಾಸಕ ಗಣೇಶ್, ರಾಯಚೂರು ಗ್ರಾಮೀಣ ಬಸನಗೌಡ ದದ್ದಲ್ ಮತ್ತು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Comments

Leave a Reply

Your email address will not be published. Required fields are marked *