ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ

ತುಮಕೂರು: ಕರ್ನಾಟಕದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪರಸ್ಪರ ಏಕ ವಚನದಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. ಆದ್ರೆ ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಬಿ.ಸುರೇಶ್ ಗೌಡರು ಮಾತ್ರ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಶಕರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಾಗಿ ಶೇರ್ ಮಾಡುತ್ತಿದ್ದು, ಮತ್ತು ಬಿಜೆಪಿಯ ಕಾಲೆಳೆಯಲು ಈ ವಿಡಿಯೋವನ್ನು ಬಳಸಿಕೊಳ್ಳುತ್ತಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಸಿದ್ದರಾಮಯ್ಯನವರ ಹೋರಾಟ, ಪರಿಶ್ರಮ ಹಾಗೂ ಅವರ ಪ್ರಾಮಾಣಿಕತೆ ಎಲ್ಲವೂ ಇದ್ದೀದಿಕೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋದ್ರು. ಎಲ್ಲರೂ ಅವರಂತೆ ಸಾಧಕರಾಗಬೇಕು. ಮಾನ್ಯ ಸಿದ್ದರಾಮಯ್ಯನವರು ಮಾಡಿದ ಕೆಲಸಗಳನ್ನು ಇಡೀ ಕರ್ನಾಟಕ ರಾಜ್ಯದ ಎಲ್ಲಾ ಸಮುದಾಯದವರು ಒಪ್ಪುತ್ತಾರೆ. ಅದನ್ನು ನಾವು ಹೆಮ್ಮೆಯಿಂದ ಹೇಳುತ್ತೇವೆ. ಯಾಕಂದ್ರೆ ಒಬ್ಬ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಅದನ್ನು ಹೇಳುವುದು ನಮ್ಮ ಕರ್ತವ್ಯ ಆಗಿದೆ. ರಾಜಕೀಯ ಪಕ್ಷಗಳು ಬೇರೆ ಬೇರೆ ಇರ್ಬೋದು ಅಂದ್ರು.

https://www.youtube.com/watch?v=VZLBeoi0aCs

 

Comments

Leave a Reply

Your email address will not be published. Required fields are marked *