ಬೆಂಗಳೂರು: ವಿಧಾನಸಭಾ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ನಿಂದ ರಮೇಶ್ ಕುಮಾರ್ ಕಣದಲ್ಲಿದ್ದರೆ, ಬಿಜೆಪಿ ಸುರೇಶ್ ಕುಮಾರ್ ಅವರನ್ನು ನಿಲ್ಲಿಸಿದೆ.
ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೊಂಡ ಹಿನ್ನೆಲೆಯಲ್ಲಿ ಸಂಖ್ಯಾಬಲ ಇರುವ ಕಾರಣ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆ ಆಗಬಹುದು. ಬಿಜೆಪಿ ಸದನದಲ್ಲಿ ಬಹುಮತ ಸಾಬೀತು ಪಡಿಸದ ಕಾರಣ ಸ್ಪೀಕರ್ ಹುದ್ದೆಗೆ ಸ್ಪರ್ಧಿಸುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಬಿಜೆಪಿ ಸುರೇಶ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದು, ಕುತೂಹಲ ಹೆಚ್ಚಾಗಿದೆ.
ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ಇರುವ ಕಾರಣ ಸುರೇಶ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಳೆ ನಡೆಯಲಿರುವ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಮತ್ತಿತರ ಹಿರಿಯರ ಸೂಚನೆಯ ಮೇರೆಗೆ ಅಭ್ಯರ್ಥಿಯಾಗಿ ನಾನು ಇಂದು ನಾಮಪತ್ರ ಸಲ್ಲಿಸಿದೆ. ನಾಮಪತ್ರಕ್ಕೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಹಾಗೂ ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ರವರು ಸಹಿ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ನಾಳೆ ನಡೆಯಲಿರುವ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ (Speaker) ಚುನಾವಣೆಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಮತ್ತಿತರ ಹಿರಿಯರ ಸೂಚನೆಯ ಮೇರೆಗೆ ಅಭ್ಯರ್ಥಿಯಾಗಿ ನಾನು ಇಂದು ನಾಮಪತ್ರ ಸಲ್ಲಿಸಿದೆ.
ನಾಮಪತ್ರಕ್ಕೆ ಕಾರ್ಕಳದ ಶಾಸ ಸುನೀಲ್ ಕುಮಾರ್ ಹಾಗೂ ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ರವರು ಸಹಿ ಮಾಡಿದ್ದಾರೆ.
— S.Suresh Kumar (@nimmasuresh) May 24, 2018

Leave a Reply