ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (V.Srinivas Prasad) ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅನಾರೋಗ್ಯ ಕಾರಣಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದರ ಆರೋಗ್ಯ ಕುರಿತು ವೈದ್ಯ ಸುದರ್ಶನ್‌ ಬಲ್ಲಾಳ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಗೆ ಬಂದಿಳಿದ ಪ್ರಧಾನಿ ಮೋದಿ

ಸುದರ್ಶನ್‌ ಬಲ್ಲಾಳ ಮಾತನಾಡಿ, ಶ್ರೀನಿವಾಸ್‌ ಪ್ರಸಾದ್‌ ಅವರು 25 ವರ್ಷದಿಂದ ನಮ್ಮ ಬಳಿ ಚಿಕಿತ್ಸೆಗೆ ಬರ್ತಾ ಇದ್ದಾರೆ. ಎಪ್ರಿಲ್ 22 ರಂದು ಇನ್‌ಫೆಕ್ಷನ್‌ ಅಂತಾ ಬಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಗರ್, ಬಿಪಿ ವ್ಯತ್ಯಾಸ ಇರುವುದರಿಂದ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.