ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ – ಪ್ರಮಖರು ಭಾಗಿ

ನವದೆಹಲಿ: ಬಹುತೇಕ ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ದೆಹಲಿಯಲ್ಲಿ ಇಂದು ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು. ಇಂದು ಮೋದಿ ಮತ್ತು ಜೆ.ಪಿ.ನಡ್ಡಾ ಅವರು ಪಕ್ಷದ ಕುರಿತು ಮಾತನಾಡಲಿದ್ದು, ಪಂಜಾಬ್, ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸುವ ಸಾಧ್ಯತೆ ಇದೆ. ಜೊತೆಗೆ ದೇಶದಲ್ಲಿ ನಡೆದಂತಹ ಉಪಚುನಾವಣೆಯ ಸೋಲಿನ ಕುರಿತು ಅವಲೋಕನ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚೆನ್ನೈನಲ್ಲಿ ವರುಣನ ಆರ್ಭಟ – ಪ್ರವಾಹದ ಎಚ್ಚರಿಕೆ

ರಾಷ್ಟ್ರೀಯ ಕಾರ್ಯಕಾರಣಿಯ ಪ್ರತಿ 3 ತಿಂಗಳಿಗೊಮ್ಮೆ ನಡೆಯಬೇಕು. ಆದರೆ, ದೇಶದಲ್ಲಿ ಕೊರೊನಾದಿಂದಾಗಿ ಕಾರ್ಯಕಾರಣಿ ಸಭೆ ನಡೆದಿರಲಿಲ್ಲ. ಇದೀಗ ಬಹುತೇಕ ಎರಡು ವರ್ಷಗಳ ನಂತರ ಈ ಸಭೆ ನಡೆಯುತ್ತಿದೆ. ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೇಂದ್ರದ ಸಚಿವರು, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು, ಪ್ರಮುಖ ಮುಖಂಡರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಕರ್ನಾಟಕದಿಂದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್ ಅಶೋಕ್, ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ: ದಾರಿಯಲ್ಲಿ ಐದು ಗ್ರಾನೈಡ್ ಪತ್ತೆ!

Comments

Leave a Reply

Your email address will not be published. Required fields are marked *