ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್ – ಪ್ರಜಾಪ್ರಭುತ್ವದ ಕೊಲೆ ಎಂದ ಜೆ.ಪಿ.ನಡ್ಡಾ

ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಬಂಧನದಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ತೆಲಂಗಾಣ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ಸರ್ಕಾರವು ಸಂಜಯ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಸಂಜಯ್ ಅವರು ಸರ್ಕಾರದ ಎಲ್ಲಾ ಮಾರ್ಗಸೂಚಿಯನ್ನು ಅನುಸರಿಸಿಯೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಪೊಲೀಸರು ಅವರನ್ನು ಬಂಧಿಸುವ ಮೊದಲು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಕೊಲೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಇತ್ತೀಚಿನ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಸಿಗುತ್ತಿರುವ ಜನಬೆಂಬಲ ಹಾಗೂ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿನಿಂದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‍ರಾವ್ ಹತಾಶರಾಗಿದ್ದಾರೆ. ಅದಕ್ಕೆ ಈ ರೀತಿ ವರ್ತಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

ಭಾನುವಾರದಂದು ವಿವಿಧ ಬೇಡಿಕೆಗಳನ್ನು ಈಡೇರಿಸಲು ಶಿಕ್ಷಕರ ಸಂಘಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಜಯ್ ನೇತೃತ್ವವನ್ನು ವಹಿಸಿದ್ದರು. ಆದರೆ ಕೊರೊನಾ ತಡೆಗೆ ಸರ್ಕಾರ ಹಾಕಿದ್ದ ನಿರ್ಬಂಧಗಳನ್ನು ಉಲ್ಲೇಖಿಸಿದ್ದಾರೆ ಎಂಬ ಆರೋಪದ ಮೇಲೆ ಕರೀಂ ನಗರದ ಪೊಲೀಸರು ಸಂಜಯ್ ಅವರನ್ನು ಬಂಧಿಸಿದ್ದಾರೆ.  ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

Comments

Leave a Reply

Your email address will not be published. Required fields are marked *