ಹರಿಪ್ರಸಾದ್ ಹೇಳಿಕೆಗೂ ಮೋದಿ ಮಧ್ಯ ಪ್ರವೇಶಿಸಬೇಕು: ಸಿಎಂಗೆ ಬಿಜೆಪಿ ಟ್ವೀಟ್ ಟಾಂಗ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ಜವಾಬ್ದಾರಿ ಹಾಗೂ ಅಧಿಕಾರವನ್ನು ಮರೆತು ಮಾತೆತ್ತಿದರೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯ ಪ್ರವೇಶಿಸಬೇಕು ಎನ್ನುತ್ತಾರೆ. ಮುಂದಿನ ದಿನಗಳಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಿಎಂ ಬದಲಿಸುವ ವಿಚಾರ ಮಾತಾಡಿದ್ದಕ್ಕೂ ಪ್ರಧಾನಿ ಮೋದಿಯವರು ಮಧ್ಯ ಪ್ರವೇಶಿಸಬೇಕು ಎಂದರು ಅಚ್ಚರಿ ಇಲ್ಲ ಎಂದು ಬಿಜೆಪಿ (BJP) ಸರಣಿ ಟ್ವೀಟ್‍ಗಳಲ್ಲಿ ಸಿಎಂಗೆ ಟಾಂಗ್ ಕೊಟ್ಟಿದೆ.

ಅಲ್ಲದೇ ಮೂರು ಡಿಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್‍ನಲ್ಲಿ ಕಿತ್ತಾಟ ಜೋರಾಗಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ರೈತರ ಅತ್ಮಹತ್ಯೆ ಹೆಚ್ಚಿದೆ. ಶ್ಯಾಡೋ ಸಿಎಂ ಹಾವಳಿ ಹೆಚ್ಚಾಗಿ, ರಾಜ್ಯದ ಸಚಿವರು ಹಾಗೂ ಅಧಿಕಾರಿಗಳು ಬೇಸತ್ತಿದ್ದಾರೆ. ರಾಜ್ಯದಲ್ಲಿ ಕಮಿಷನ್, ಕಲೆಕ್ಷನ್ ಹಾಗೂ ವರ್ಗಾವಣೆ ದಂಧೆ ಹೆಚ್ಚಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯ ಪ್ರವೇಶಿಸಬೇಕು ಎಂದು ಬಿಜೆಪಿ ಟ್ವಿಟ್ಟರ್‌ನಲ್ಲಿ ವ್ಯಂಗ್ಯ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿಯಿಂದ ಪ್ರತ್ಯೇಕ ಗಣೇಶನ ಪ್ರತಿಷ್ಠಾಪನೆ – ವಿಸರ್ಜನೆ ವೇಳೆ ಗುಂಪು ಘರ್ಷಣೆ

ಪ್ರಧಾನಿ ಮೋದಿಯವರಿಗೆ ದೇಶ ಮುನ್ನೆಡೆಸುವ ಜವಾಬ್ದಾರಿ ಇದೆ. ಸಿದ್ದರಾಮಯ್ಯ ಅವರಿಗೂ ರಾಜ್ಯದ ಜವಾಬ್ದಾರಿ ಇದೆ. ಮೊದಲು ನಿಮ್ಮ ಒಳ ಜಗಳದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ರಾಜ್ಯದ ಜನರ ಹಿತ ಕಾಪಾಡಲು ಮಾಡಬೇಕಾದ ಕೆಲಸಗಳನ್ನು ಮಾಡಿ ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿಯನ್ನು ನಿರ್ವಹಿಸಿ ಎಂದು ಬಿಜೆಪಿ ಟ್ವೀಟ್‍ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಹಾಲಶ್ರೀ ಮಠದಲ್ಲಿ ಮಹಜರು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]