ನವದೆಹಲಿ: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಮ್ಮ ಶಾಸಕರನ್ನು ಅನರ್ಹ ಎನ್ನುತ್ತಿದ್ದರು. ಇಂದು ಕಾಂಗ್ರೆಸ್, ಜೆಡಿಎಸ್ ಪಕ್ಷವನ್ನೇ ಜನರು ಅನರ್ಹ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೀಂ ವರ್ಕ್ ಮಾಡಿ ಗೆಲುವು ಸಾಧಿಸಿದ್ದೇವೆ. ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಸುಭದ್ರ ಮತ್ತು ಅತ್ಯುತ್ತಮ ಸರ್ಕಾರ ನೀಡುತ್ತೇವೆ ಎಂದು ಭರವಸೆ ನಿಡಿದರು.

ನಾವು ಶಾಸಕರನ್ನು ಸೆಳೆಯುವುದಿಲ್ಲ. ಜೆಡಿಎಸ್, ಕಾಂಗ್ರೆಸ್ ಶಾಸಕರು ಅಸಮಾಧಾನ ಹೊಂದಿದ್ದಾರೆ. ಅವರು ನಮ್ಮ ಪಾರ್ಟಿಗೆ ಬಂದರೆ ನಾವು ಸ್ವೀಕಾರ ಮಾಡುತ್ತೇವೆ. ಸಾಮಾನ್ಯ ಕಾರ್ಯಕರ್ತರು ಬಂದರೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಪ್ರಧಾನಿ ಮೋದಿ ಮಾರ್ಗದರ್ಶನ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ಉಪಚುನಾವಣೆಯಲ್ಲಿಯೂ ಗೆದ್ದಿದ್ದೇವೆ. ಜನರು ಬಿಜೆಪಿಗೆ ಆರ್ಶೀವಾದ ಮಾಡಿದ್ದಾರೆ. 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಗೆದ್ದಿದ್ದೇವೆ. ಅಭಿವೃದ್ಧಿ ಪರ ಯೋಜನೆಗಳನ್ನು ನೋಡಿ ಜನ ಮತ ಹಾಕಿದ್ದಾರೆ. ಕಲ್ಯಾಣ ಕರ್ನಾಟಕ ದೃಷ್ಟಿಯಿಂದ ಜನರು ಬಿಎಸ್‍ವೈಯನ್ನು ಬೆಂಬಲಿಸಿದ್ದಾರೆ. ಅಭಿವೃದ್ಧಿ ಚಿಂತನೆಗಳಿಗೆ ಮತ ಹಾಕಿದ್ದಾರೆ ಎಂದು ಹೇಳುತ್ತಾ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಮಂಡ್ಯ, ಚಿಕ್ಕಬಳ್ಳಾಪುರ, ಕೆಆರ್ ಪೇಟೆಯಲ್ಲಿ ಮೊದಲ ಬಾರಿ ಬಿಜೆಪಿ ದ್ವಜ ಹಾರಿದೆ. ಜಿದ್ದಾಜಿದ್ದಿ ಹೋರಾಟ ಮಾಡಿ ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

Leave a Reply