ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

ಬೆಂಗಳೂರು/ಉಡುಪಿ: ಬಿಜೆಪಿ (BJP) ಬಂಡಾಯ ಅಭ್ಯರ್ಥಿಯಾಗಿ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ಮಾಜಿ ಶಾಸಕ ರಘುಪತಿ ಭಟ್‌ (Raghupati Bhat) ಅವರನ್ನು ಉಚ್ಚಾಟಿಸಲಾಗಿದೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: 24 ಗಂಟೆಯೊಳಗೆ ಚುನಾವಣಾ ಕಣದಿಂದ ನಿವೃತ್ತರಾಗಿ: ರಘುಪತಿ ಭಟ್‍ಗೆ ಸುನಿಲ್ ಕುಮಾರ್ ಎಚ್ಚರಿಕೆ

ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ.

ಈ ಮೊದಲು ಪಕ್ಷೇತರ ಸ್ಪರ್ಧೆಗೆ ಸ್ಪಷ್ಟನೆ ಕೊಡುವಂತೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿತ್ತು. ಇದೀಗ ಶಿಸ್ತು ಸಮಿತಿಯಿಂದ ರಘುಪತಿ ಭಟ್ ಉಚ್ಚಾಟನೆ ಮಾಡಿ ಅದೇಶ ಹೊರಡಿಸಲಾಗಿದೆ. ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಇದನ್ನೂ ಓದಿ: ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ: ಕೆ.ರಘುಪತಿ ಭಟ್‌ ಬೇಸರ