ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ಮುಂಬೈ: ಥಾಣೆ ಜಿಲ್ಲೆಯ ಮೀರಾ- ಭಯಾಂದರ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, 95 ಸ್ಥಾನಗಳ ಪೈಕಿ 65ರಲ್ಲಿ ಜಯಗಳಿಸಿದೆ.

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರವಿದ್ದರೂ ಬಿಜೆಪಿ ಮತ್ತು ಶಿವಸೇನೆ ಪ್ರತ್ಯೇಕವಾಗಿ ಸ್ಫರ್ಧಿಸಿದ್ದ ಈ ಚುನಾವಣೆಯಲ್ಲಿ ಶಿವಸೇನೆ 22 ಸ್ಥಾನಗಳನ್ನು ಗೆದ್ದುಕೊಂಡಿದೆ.

2012ರ ಚುನಾವಣೆಯಲ್ಲಿ 26 ಸ್ಥಾನಗಳನ್ನು ಗೆದ್ದಿದ್ದ ಎನ್‍ಸಿಪಿ ಈ ಬಾರಿ ಒಂದು ಸ್ಥಾನವನ್ನು ಗೆದ್ದಿಲ್ಲ. ಕಾಂಗ್ರೆಸ್ ಫಲಿತಾಂಶ ಕುಸಿತವಾಗಿದ್ದು, ಕಳೆದ ಬಾರಿ 19 ಸ್ಥಾನ ಗೆದ್ದಿದ್ದರೆ ಈ ಬಾರಿ 10 ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ.

ಕಳೆದ ಚುನಾವಣೆಯಲ್ಲಿ 1 ಸ್ಥಾನವನ್ನು ಗೆದ್ದಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‍ಎಸ್) ಈ ಬಾರಿ ಶೂನ್ಯ ಸಂಪಾದಿಸಿದೆ. 2012ರ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನವನ್ನು ಗೆದ್ದಿದ್ದರೆ, ಶಿವಸೇನೆ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಭಾನುವಾರ ನಡೆದ ಚುನಾವಣೆಯಲ್ಲಿ 509 ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದರು. ಸರ್ಕಾರದ ಅಭಿವೃದ್ಧಿ ನೋಡಿ ಜನ ಬಿಜೆಪಿಯನ್ನು ಗೆಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಫಲಿತಾಂಶದ ಬಳಿಕ ಟ್ವೀಟ್ ಮಾಡಿದ್ದಾರೆ.

 

Comments

Leave a Reply

Your email address will not be published. Required fields are marked *