ರಾಜ್ಯಾದ್ಯಂತ ಬಿಜೆಪಿಯಿಂದ ಕರಾಳ ದಿನಾಚರಣೆ – ಮಂಗ್ಳೂರಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು/ಮಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ 25ನೇ ಮುಖ್ಯಮಂತಿಯಾಗಿ ಇಂದು ಸಂಜೆ 4.30ರ ಸುಮಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಖಂಡಿಸಿ ಬಿಜೆಪಿ ಕರಾಳ ದಿನವನ್ನು ಆಚರಿಸುತ್ತಿದೆ.

ಎಚ್‍ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‍ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ 11 ಗಂಟೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕರಾಳ ದಿನಾಚರಣೆ ನಡೆಯಲಿದೆ.

ಆಯಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಭಾಗದ ನಾಯಕರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಮಂಗಳೂರು ನಗರದಲ್ಲಿ ಕಲಂ 35ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಮೇ25ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ ಅಂತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಇನ್ನು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ವಿಜಯೋತ್ಸವ, ರಾಜಕೀಯ ಸಭೆ ನಡೆಸಬಾರದು ಎಂದು ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *