ಸಿದ್ದರಾಮಯ್ಯ, ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ: ಬಿಜೆಪಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪಕ್ಷಾಂತರದ ಸುದ್ದಿಯಾಗುತ್ತಿದ್ದಂತೆ, ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಅಲ್ಲದೇ ಕಾಂಗ್ರೆಸ್ ಸೇರಲು ಸಂಪರ್ಕದಲ್ಲಿರುವ ಶಾಸಕರ ಹೆಸರು ಬಹಿರಂಗಪಡಿಸುವಂತೆ ಬಿಜೆಪಿ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದೆ.

bjp - congress

ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಕಾಂಗ್ರೆಸ್‍ನವರು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ. ಇದು ಕಾಂಗ್ರೆಸ್ ಕಳ್ಳಾಟ. ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ. ಇದನ್ನೂ ಓದಿ: ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ

ಎಂ.ಬಿ.ಪಾಟೀಲರಿಗೆ ಅಭಿನಂದನೆಗಳು. ನಿಮ್ಮ ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ ಎಂದು ನಾವು ಆಶಿಸುತ್ತೇವೆ. ಎಂ.ಬಿ.ಪಾಟೀಲ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ವೀರಶೈವ – ಲಿಂಗಾಯಿತ ಧರ್ಮ ವಿಭಜನೆಗೆ ಕಾರಣೀಕರ್ತರಾಗಿದ್ದರು. ಆಗ ಎಂ.ಬಿ.ಪಾಟೀಲ್ ಅವರು ಸಿದ್ದರಾಮಯ್ಯನವರ ಕೈಗೊಂಬೆಯಾಗಿದ್ದರು, ಈಗ ಸಮಯದ ಗೊಂಬೆಯಾಗದಿರಿ. ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ: ಈಶ್ವರಪ್ಪ

Comments

Leave a Reply

Your email address will not be published. Required fields are marked *