ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಿರುವ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾತಾವರಣ ಬಹಳ ಚೆನ್ನಾಗಿದೆ. ಈಗ ಏನು ಗೊತ್ತಾಗಲ್ಲ. ನಮ್ಮವರು ವರದಿ ಕೊಟ್ಟಿರುವ ಪ್ರಕಾರ ಎಲ್ಲ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರತಿ ಚುನಾವಣೆಯಲ್ಲೂ ಮತದಾರರು ತಮ್ಮದೇ ರೀತಿಯಲ್ಲಿ ತೀರ್ಮಾನ ನೀಡುತ್ತಾರೆ. ಉಪ ಚುನಾವಣೆ, ವಿಧಾನಸಭಾ ಚುನಾವಣೆ ಅದರದ್ದೇ ಆದ ನೆಲೆಗಟ್ಟಿನಲ್ಲಿ ನಡೆಯುತ್ತದೆ. ಆವತ್ತಿನ ಸಂದರ್ಭದ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಫಲಿತಾಂಶ ಹೊರಬೀಳುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ- 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬೆಳಗಾವಿಯಲ್ಲಿ ನಡೆಯುಲಿರುವ ಚಳಿಗಾಲದ ಅಧಿವೇಶನ ಕುರಿತು ಮಾತನಾಡಿ, ಉತ್ತರ ಕರ್ನಾಟಕದ ಹಲವು ಸಮಸ್ಯೆಗಳು ಸಹಜವಾಗಿ ಚರ್ಚೆಗೆ ಬರುತ್ತವೆ ಎಂದು ನಿರೀಕ್ಷಿಸಿದ್ದೇವೆ. ಇಲ್ಲಿಯೂ ಸಚಿವ ಸಂಪುಟ ಸಭೆ ಮಾಡುವ ಚರ್ಚೆ ನಡೆದಿದೆ. ಆ ಸಂದರ್ಭದಲ್ಲಿ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡುತ್ತೇವೆ. ಮಹದಾಯಿ ವಿವಾದ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ ಎಲ್ಲದರ ಬಗ್ಗೆ ಚರ್ಚೆ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಬಳಿಕ ನಾನು ಸಿಎಂ ರೇಸಿನಲ್ಲಿದ್ದೇನೆ: ಶಾಮನೂರು ಶಿವಶಂಕರಪ್ಪ
Leave a Reply