ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರೀ ಅಂತರದ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ್‌ ಭೂಸನೂರ ಜಯದ ನಗೆ ಬೀರಿದ್ದಾರೆ.

22 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ 31,185 ಮತಗಳ ಅಂತರದಿಂದ ಜಯಗಳಿಸಿದೆ.

ಬಿಜೆಪಿ ಒಟ್ಟು 93,865, ಕಾಂಗ್ರೆಸ್ 62,680 ಮತಗಳನ್ನು ಗಳಿಸಿದರೆ, ಜೆಡಿಎಸ್ 4,353 ಮತ ಗಳಿಸಲಷ್ಟೇ ಶಕ್ತವಾಗಿದೆ. ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಉದ್ದೇಶದಿಂದ ಮನಗೂಳಿ ಅವರ ಪುತ್ರನಿಗೆ ಟಿಕೆಟ್‌ ನೀಡದೇ ಜೆಡಿಎಸ್‌ ನಾಜಿಯಾ ಅಂಗಡಿ ಅವರಿಗೆ ಟಿಕೆಟ್‌ ನೀಡಿತ್ತು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭರ್ಥಿ ಗೆಲುವು ಸಾಧಿಸಿರುವುದಕ್ಕೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಸಮಾಧಿಗೆ ಹಾಲು ತುಪ್ಪ ಕಾರ್ಯ ನೆರವೇರಿಸಿದ ಕುಟುಂಬಸ್ಥರು

 

sindagi

“ಸಿಂದಗಿ ಉಪ ಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

Comments

Leave a Reply

Your email address will not be published. Required fields are marked *