ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ (Namma Metro ) ಪಿಲ್ಲರ್‌ಗೆ ಡಿಕ್ಕಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.

ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿದೆ. ಪರಿಣಾಮ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಸ್ ಬ್ರೇಕ್ ಫೇಲ್ ಆಗಿ ಸುಮಾರು ಅರ್ಧ ಕಿಮೀ ಬಸ್ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ.

ಅಪಘಾತ ತಪ್ಪಿಸಲು ವಾಹನಗಳನ್ನ ಓವರ್ ಟೇಕ್ ಮಾಡಿಕೊಂಡು ಚಾಲಕ ಬಸ್ ಚಲಾಯಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕ್ರೇನ್ ಮೂಲಕ ಬಸ್ ತೆರವು ಮಾಡಲಾಗಿದೆ.

ಚಾಲಕ, ಕಂಡಕ್ಟರ್ ಸೇರಿ 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.